ಲೋಕಸಭೆ ಅಧಿವೇಶನ
ಪ್ರಾತಿನಿಧಿಕ ಚಿತ್ರ
ನವದೆಹಲಿ: ‘ಆದಾಯ– ತೆರಿಗೆ ಮಸೂದೆ, 2025’ ಅನ್ನು ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ವಿರೋಧ ಪಕ್ಷಗಳ ಗದ್ದಲದ ನಡುವೆಯೇ ಲೋಕಸಭೆಯಲ್ಲಿ ಹಿಂಪಡೆದರು.
ಈ ಮಸೂದೆಗೆ ಸಂಬಂಧಿಸಿದಂತೆ ಪರಿಶೀಲನಾ ಸಮಿತಿಯು ಸೂಚಿಸಿರುವ ಬದಲಾವಣೆಗಳನ್ನು ಸೇರ್ಪಡೆಗೊಳಿಸಿದ ನಂತರ, ಸರ್ಕಾರವು ಆ.11ರಂದು ಮತ್ತೆ ಮಂಡಿಸಲಿದೆ ಎಂದು ಮೂಲಗಳು ತಿಳಿಸಿವೆ.
ಆದಾಯ ತೆರಿಗೆಯ ಪರಿಷ್ಕೃತ ಮಸೂದೆಯು, ಪರಿಶೀಲನಾ ಸಮಿತಿಯ ಎಲ್ಲ ಶಿಫಾರಸುಗಳನ್ನು ಒಳಗೊಂಡಿದೆ ಎನ್ನಲಾಗಿದೆ.
ಬೈಜಯಂತ್ ಪಾಂಡಾ ನೇತೃತ್ವದ ಪರಿಶೀಲನಾ ಸಮಿತಿಯು ಫೆ. 13ರಂದು ಲೋಕಸಭೆಯಲ್ಲಿ ಮಂಡಿಸಲಾದ ಆದಾಯ ತೆರಿಗೆ ಮಸೂದೆಯಲ್ಲಿ ಹಲವು ಬದಲಾವಣೆಗಳನ್ನು ಸೂಚಿಸಿದೆ.
ಐಟಿಆರ್ ಸಲ್ಲಿಸಿದ ದಿನಾಂಕದ ನಂತರವೂ ಯಾವುದೇ ದಂಡ ಶುಲ್ಕ ಪಾವತಿಸದೆ ತೆರಿಗೆದಾರರಿಗೆ ಟಿಡಿಎಸ್ ಮರುಪಾವತಿಯನ್ನು ಪಡೆಯಲು ಅವಕಾಶ ನೀಡುವುದು ಹಾಗೂ ಧಾರ್ಮಿಕ– ದತ್ತಿ ಟ್ರಸ್ಟ್‌ಗಳಿಗೆ ನೀಡಿದ ಅನಾಮಧೇಯ ದೇಣಿಗೆಗಳ ಮೇಲೆ ತೆರಿಗೆ ವಿನಾಯಿತಿ ಮುಂದುವರಿಸಬೇಕು ಎಂಬುದು ಪರಿಶೀಲನಾ ಸಮಿತಿಯು ಜುಲೈ 21ರಂದು ಲೋಕಸಭೆಗೆ ಸಲ್ಲಿಸಿರುವ ವರದಿಯಲ್ಲಿರುವ ಪ್ರಮುಖ ಶಿಫಾರಸು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.