

ಎ.ಐ ಚಿತ್ರ
ನವದೆಹಲಿ: ಕರ್ನಾಟಕದಲ್ಲಿ ಅನುಷ್ಠಾನಗೊಳ್ಳುತ್ತಿರುವ ಕೇಂದ್ರ ವಲಯದ 70 ಮೂಲ ಸೌಕರ್ಯ ಯೋಜನೆಗಳ ಮೊತ್ತ ಸೆನ್ಸೆಕ್ಸ್‌ನಂತೆ ಜಿಗಿದು ₹15,000 ಕೋಟಿಗಳಷ್ಟು ಹೆಚ್ಚಾಗಿದೆ.
ರಾಜ್ಯದಲ್ಲಿ ಕಾಮಗಾರಿಗಳು ಆಮೆಗತಿಯಲ್ಲಿ ಸಾಗುತ್ತಿರುವುದರಿಂದ ವೆಚ್ಚ ತೀವ್ರಗತಿಯಲ್ಲಿ ಏರಿದೆ ಎಂದು ಕೇಂದ್ರ ಸಾಂಖ್ಯಿಕ ಹಾಗೂ ಯೋಜನೆಗಳ ಅನುಷ್ಠಾನ ಸಚಿವಾಲಯದ ವರದಿಯಲ್ಲಿ ಉಲ್ಲೇಖಿಸಲಾಗಿದೆ.
₹150 ಕೋಟಿಗಿಂತ ಹೆಚ್ಚು ಮೊತ್ತದ ಹೆದ್ದಾರಿ, ನಗರಾಭಿವೃದ್ಧಿ, ರೈಲ್ವೆ ಸೇರಿದಂತೆ ವಿವಿಧ ವಲಯಗಳ ಯೋಜನೆಗಳ ವೆಚ್ಚ ₹1.40 ಲಕ್ಷ ಕೋಟಿಯಿಂದ ₹1.55 ಲಕ್ಷ ಕೋಟಿಗೆ ಏರಿಕೆಯಾಗಿದೆ ಎಂದು ವರದಿ ತಿಳಿಸಿದೆ. ದೇಶದ ಎಲ್ಲ ರಾಜ್ಯಗಳಲ್ಲಿ ಕಾರ್ಯಗತಗೊಳ್ಳುತ್ತಿರುವ 1,392 ಯೋಜನೆಗಳ ಪ್ರಗತಿ ವರದಿಯನ್ನು ಸಚಿವಾಲಯ ಗುರುವಾರ ಬಿಡುಗಡೆ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.