ADVERTISEMENT

ಮೀಸಲಾತಿ ಪ್ರಮಾಣದ ಹೆಚ್ಚಳ ಅಗತ್ಯ: ಕೇಂದ್ರ ಸಚಿವ ರಾಮದಾಸ್ ಅಠಾವಳೆ

​ಪ್ರಜಾವಾಣಿ ವಾರ್ತೆ
Published 11 ಜುಲೈ 2021, 11:53 IST
Last Updated 11 ಜುಲೈ 2021, 11:53 IST
ಸಂವಿಧಾನ ಮತ್ತು ಮೀಸಲಾತಿ–ಪ್ರಾತಿನಿಧಿಕ ಚಿತ್ರ
ಸಂವಿಧಾನ ಮತ್ತು ಮೀಸಲಾತಿ–ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ಎಲ್ಲ ಸಮುದಾಯಗಳಲ್ಲಿ ಇರುವ ಹಿಂದುಳಿದ ಮತ್ತು ಬಡ ಜನರಿಗೆ ಮೀಸಲಾತಿ ಸೌಲಭ್ಯ ದೊರೆಯಬೇಕಿದೆ. ಅದಕ್ಕೆ ಪೂರಕವಾಗಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಬೇಕಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ರಾಮದಾಸ್ ಅಠಾವಳೆ ಹೇಳಿದರು.

ಭಾನುವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 'ಮೀಸಲಾತಿಯ ಪ್ರಮಾಣ ಶೇಕಡ 50ರಷ್ಟನ್ನು ಮೀರಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಆದರೆ, ಶೋಷಿತ ಸಮುದಾಯಗಳಿಗೆ ನ್ಯಾಯ ಒದಗಿಸಲು ಮೀಸಲಾತಿ ಹೆಚ್ಚಿಸಲೇಬೇಕಿದೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಚರ್ಚೆ ನಡೆಸಲಾಗಿದೆ' ಎಂದರು.

ಯಾವುದೇ ಸಮುದಾಯದ ಬಡವರು, ಹಿಂದುಳಿದವರು ಮಾತ್ರ ಮೀಸಲಾತಿ ‌ಸೌಲಭ್ಯ ಪಡೆಯಬೇಕು. ಆದರೆ, ಅನರ್ಹರೇ ಮೀಸಲಾತಿ ಪಡೆಯುತ್ತಿರುವುದು ಹೆಚ್ಚುತ್ತಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ‌ ಮೀಸಲಾತಿಯನ್ನು ಆರ್ಥಿಕವಾಗಿ ಸಶಕ್ತರಾಗಿ ಇರುವವರೇ ಪಡೆಯುತ್ತಿದ್ದಾರೆ. ಅದನ್ನು ತಪ್ಪಿಸಲು ಕ್ರಮದ ಅಗತ್ಯವಿದೆ ಎಂದರು.

ADVERTISEMENT

ದೇಶದಾದ್ಯಂತ ಜಾತಿವಾರು ಜನಗಣತಿ ನಡೆಸಬೇಕಿದೆ. ಅದರಿಂದ ಆಯಾ ಸಮುದಾಯಗಳ ಜನರಿಗೆ ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ನ್ಯಾಯ ದೊರಕಿಸಲು ಸಾಧ್ಯವಾಗುತ್ತದೆ ಎಂದು ಅಠಾವಳೆ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.