ADVERTISEMENT

Ind-Pak Tensions | ಆಸ್ಪತ್ರೆ, ಶಾಲೆಗಳತ್ತ ಪಾಕಿಸ್ತಾನದ ಗುರಿ: ಸೇನೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 10 ಮೇ 2025, 6:29 IST
Last Updated 10 ಮೇ 2025, 6:29 IST
<div class="paragraphs"><p>ಪಾಕಿಸ್ತಾನ ಸೇನಾ ಪಡೆಗಳು ನಡೆಸಿದ&nbsp;ಶೆಲ್‌ ದಾಳಿಯಲ್ಲಿ ಕಟ್ಟಡವೊಂದಕ್ಕೆ ಹಾನಿಯಾಗಿರುವುದು</p></div>

ಪಾಕಿಸ್ತಾನ ಸೇನಾ ಪಡೆಗಳು ನಡೆಸಿದ ಶೆಲ್‌ ದಾಳಿಯಲ್ಲಿ ಕಟ್ಟಡವೊಂದಕ್ಕೆ ಹಾನಿಯಾಗಿರುವುದು

   

ರಾಯಿಟರ್ಸ್ ಚಿತ್ರ

ಶ್ರೀನಗರ: ಪಾಕಿಸ್ತಾನ ಸಶಸ್ತ್ರ ಪಡೆಗಳು ಗಡಿ ಪ್ರದೇಶದಲ್ಲಿರುವ ಶಾಲೆಗಳು, ಆಸ್ಪತ್ರೆಗಳನ್ನು ಗುರಿಯಾಗಿಸಿ ದಾಳಿ ನಡೆಸುತ್ತಿದೆ ಎಂದು ಭಾರತೀಯ ಸೇನೆ ತಿಳಿಸಿದೆ.

ADVERTISEMENT

ಭಾರತೀಯ ಸೇನೆಯು ತಕ್ಕ ಪ್ರತ್ಯುತ್ತರ ನೀಡುತ್ತದೆ ಎಂಬುದನ್ನು ಚೆನ್ನಾಗಿ ಬಲ್ಲ ಪಾಕಿಸ್ತಾನ ಸೇನೆಯು ತನ್ನ ವಾಯು ಪ್ರದೇಶವನ್ನೇ ಗುರಾಣಿಯನ್ನಾಗಿ ಬಳಸಿಕೊಂಡಿತ್ತು. ನಾಗರಿಕ ವಿಮಾನಗಳಿಗೆ ಅಂತರರಾಷ್ಟ್ರೀಯ ಗಡಿ ಸಮೀಪ ಹಾರಾಟ ನಡೆಸಲು ಅನುಮತಿ ನೀಡುವ ಮೂಲಕ ಬೇಜವಾಬ್ದಾರಿ ವರ್ತನೆ ಪ್ರದರ್ಶಿಸಿತ್ತು.

ಇದೀಗ, ಶ್ರೀನಗರ, ಅವಂತಿಪುರ ಮತ್ತು ಉಧಂಪುರ ವಾಯುನೆಲೆಗಳಲ್ಲಿ ಇರುವ ಆಸ್ಪತ್ರೆಗಳು ಮತ್ತು ಶಾಲಾ ಆವರಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿವೆ ಎಂದು ಸೇನೆ ಮಾಹಿತಿ ನೀಡಿದೆ.

ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌ ಜಿಲ್ಲೆಯ ಪಹಲ್ಗಾಮ್‌ನಲ್ಲಿ ಉಗ್ರರು ಏಪ್ರಿಲ್ 22 ರಂದು ಗುಂಡಿನ ದಾಳಿ ನಡೆಸಿದ್ದರು. ಆ ವೇಳೆ 26 ಮಂದಿ ಮೃತಪಟ್ಟಿದ್ದರು. ಇದಕ್ಕೆ ಪ್ರತಿಯಾಗಿ ಭಾರತೀಯ ಸೇನೆಯು ಪಾಕಿಸ್ತಾನ ಹಾಗೂ ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ ನೆಲೆಗಳನ್ನು ಗುರಿಯಾಗಿಸಿ ಮೇ 7ರಂದು 'ಆಪರೇಷನ್‌ ಸಿಂಧೂರ' ಕಾರ್ಯಾಚರಣೆ ನಡೆಸಿತ್ತು.

ಇದೀಗ ಪಾಕ್‌ ಸೇನಯು ಗಡಿಯಲ್ಲಿ ನಾಗರಿಕರು ಹಾಗೂ ಸೇನಾ ನೆಲೆಗಳನ್ನು ಗುರಿಯಾಗಿಸಿ ಶೆಲ್‌ ಹಾಗೂ ಕ್ಷಿಪಣಿ ದಾಳಿ ನಡೆಸುವ ಪ್ರಯತ್ನವನ್ನು ನಿರಂತರವಾಗಿ ಮಾಡುತ್ತಿದೆ. ಪಾಕ್‌ ದಾಳಿಯನ್ನು ಭಾರತೀಯ ಸೇನೆ, ಸಮರ್ಥವಾಗಿ ಹಿಮ್ಮೆಟ್ಟಿಸುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.