ADVERTISEMENT

ಮನೆಯಲ್ಲೇ ಧ್ವಜಾರೋಹಣ ಮಾಡಿದ ಗೃಹ ಸಚಿವ ಅಮಿತ್ ಶಾ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 15 ಆಗಸ್ಟ್ 2020, 6:55 IST
Last Updated 15 ಆಗಸ್ಟ್ 2020, 6:55 IST
ಅಮಿತ್ ಶಾ ಧ್ವಜ ವಂದನೆ ಸಲ್ಲಿಸಿದರು – ಚಿತ್ರ ಕೃಪೆ: ಅಮಿತ್ ಶಾ ಟ್ವಿಟರ್‌ ಖಾತೆ
ಅಮಿತ್ ಶಾ ಧ್ವಜ ವಂದನೆ ಸಲ್ಲಿಸಿದರು – ಚಿತ್ರ ಕೃಪೆ: ಅಮಿತ್ ಶಾ ಟ್ವಿಟರ್‌ ಖಾತೆ   

ನವದೆಹಲಿ: ಕೊರೊನಾ ವೈರಸ್ ಸೋಂಕಿನಿಂದ ಗುಣಮುಖರಾಗಿ ಪ್ರತ್ಯೇಕ ವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಮನೆಯಲ್ಲೇ ಧ್ವಜಾರೋಹಣ ಮಾಡಿ ಸ್ವಾತಂತ್ರ್ಯೋತ್ಸವ ಆಚರಿಸಿದರು.

‘ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಮನೆಯಲ್ಲಿ ಧ್ವಜಾರೋಹಣ ಮಾಡಲಾಯಿತು. ನಿಮಗೆಲ್ಲರಿಗೂ ಸ್ವಾತಂತ್ರ್ಯೋತ್ಸವದ ಶುಭಾಶಯಗಳು’ ಎಂದು ಅಮಿತ್ ಶಾ ಟ್ವೀಟ್ ಮಾಡಿದ್ದಾರೆ. ಜತೆಗೆ ಫೋಟೊಗಳನ್ನೂ ಪೋಸ್ಟ್ ಮಾಡಿದ್ದಾರೆ.

ಕೋವಿಡ್-19 ಸೋಂಕು ತಗುಲಿ ಗುರುಗ್ರಾಮದಲ್ಲಿರುವ ಮೆದಾಂತ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಶುಕ್ರವಾರ ಗುಣಮುಖರಾಗಿ ಬಿಡುಗಡೆಯಾಗಿದ್ದರು. ವೈದ್ಯರ ಸಲಹೆಯ ಮೇರೆಗೆ ಇನ್ನೂ ಕೆಲವು ದಿನಗಳವರೆಗೆ ಮನೆಯಲ್ಲಿಯೇ ಕ್ವಾರಂಟೈನ್‌ನಲ್ಲಿರುತ್ತೇನೆ ಎಂದೂ ಹೇಳಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.