ADVERTISEMENT

74ನೇ ಸ್ವಾತಂತ್ರ್ಯೋತ್ಸವ | ದೆಹಲಿ ಕೆಂಪುಕೋಟೆಯಲ್ಲಿ ಬಿಗಿ ಭದ್ರತೆ

ಪಿಟಿಐ
Published 14 ಆಗಸ್ಟ್ 2020, 2:06 IST
Last Updated 14 ಆಗಸ್ಟ್ 2020, 2:06 IST
ನವದೆಹಲಿಯ ಕೆಂಪು ಕೋಟೆಯಲ್ಲಿ ಗುರುವಾರ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಭಾರತೀಯ ಸೇನಾಪಡೆಯು ತಾಲೀಮು ನಡೆಸಿತು –ರಾಯಿಟರ್ಸ್ ಚಿತ್ರ
ನವದೆಹಲಿಯ ಕೆಂಪು ಕೋಟೆಯಲ್ಲಿ ಗುರುವಾರ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಭಾರತೀಯ ಸೇನಾಪಡೆಯು ತಾಲೀಮು ನಡೆಸಿತು –ರಾಯಿಟರ್ಸ್ ಚಿತ್ರ   

ನವದೆಹಲಿ: 74ನೇ ಸ್ವಾತಂತ್ರ್ಯೋತ್ಸವ ಆಚರಣೆಗೆ ದೆಹಲಿಯ ಕೆಂಪುಕೋಟೆಯಲ್ಲಿ ಬಹು ಸ್ತರದ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಅಂತರ ಕಾಯ್ದುಕೊಳ್ಳುವ ನಿಯಮ ಕಡ್ಡಾಯವಾಗಿ ಪಾಲಿಸಬೇಕಿದೆ. ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ದೇಶವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಎನ್‌ಎಸ್‌ಜಿ ಸ್ನೈಪರ್‌ಗಳು, ವಿಶೇಷ ಭದ್ರತಾ ಕಮಾಂಡೊಗಳನ್ನು ಕೆಂಪುಕೋಟೆ ಸುತ್ತ ನಿಯೋಜಿಸಲಾಗುತ್ತಿದೆ. ಕೆಂಪುಕೋಟೆ ಸುತ್ತ 300 ಕ್ಯಾಮರಾಗಳನ್ನು ಅಳವಡಿಸಲಾಗಿದ್ದು, ಅವುಗಳನ್ನು ಆಗಾಗ ಪರಿಶೀಲಿಸಲಾಗುತ್ತದೆ. ಸುಮಾರು 4,000 ಭದ್ರತಾ ಸಿಬ್ಬಂದಿ ಕರ್ತವ್ಯ ನಿರ್ವಹಿಸಲಿದ್ದಾರೆ. ಅಂತರ ಕಾಯ್ದುಕೊಳ್ಳುವ ನಿಯಮ ಪಾಲಿಸಿಕೊಂಡೇ ಕಾರ್ಯನಿರ್ವಹಿಸಲಿದ್ದಾರೆ ಎಂದು ‍ಪೊಲೀಸರು ತಿಳಿಸಿದ್ದಾರೆ.

ದೆಹಲಿಯ ರೈಲ್ವೆ ನಿಲ್ದಾಣಗಳ ಸುತ್ತಮುತ್ತವೂ ಬಂದೋಬಸ್ತ್ ಹೆಚ್ಚಿಸಲಾಗಿದೆ. ಕೆಂಪುಕೋಟೆ ಸಮೀಪದ ರೈಲು ಮಾರ್ಗಗಳಲ್ಲಿ ಬೆಳಿಗ್ಗೆ 6.45ರಿಂದ 8.45ರ ಅವಧಿಯಲ್ಲಿ ರೈಲು ಸಂಚಾರವಿದೆ. ಹೀಗಾಗಿ ಹಳಿಗಳ ಬಳಿಯೂ ಭದ್ರತಾ ಸಿಬ್ಬಂದಿ ನಿಯೋಜಿಸಲಾಗುತ್ತದೆ ಎಂದು ಡಿಸಿಪಿ ಹರೇಂದ್ರ ಕುಮಾರ್ ಸಿಂಗ್ ತಿಳಿಸಿದ್ದಾರೆ.

ADVERTISEMENT

ಕಾರ್ಯಕ್ರಮ ನಡೆಯುವ ಪ್ರದೇಶದ ಸುತ್ತಲಿನ ಪ್ರದೇಶಗಳ ಹೋಟೆಲ್‌ಗಳನ್ನೂ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಅನುಮಾನಾಸ್ಪದ ಚಟುವಟಿಕೆಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆ ಎಂದೂ ಅವರು ಈಗಾಗಲೇ ತಿಳಿಸಿದ್ದಾರೆ.

ಕೋವಿಡ್–19 ಲಕ್ಷಣ ಹೊಂದಿದ್ದವರು ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ಮತ್ತು ಕರ್ತವ್ಯಕ್ಕೆ ಹಾಜರಾಗದಂತೆ ಸೂಚಿಸಲಾಗಿದೆ ಎಂದೂ ಪೊಲೀಸರು ತಿಳಿಸಿದ್ದಾರೆ.

ದೆಹಲಿಯ ಕೆಂಪುಕೋಟೆಯಲ್ಲಿ ಗುರುವಾರ ಬೆಳಿಗ್ಗೆ 7ರಿಂದ 9 ಗಂಟೆಯವರಿಗೆ ಭಾರತೀಯ ನೌಕಾಪಡೆ, ವಾಯುಪಡೆ ಮತ್ತು ಭೂಸೇನಾ ಪಡೆಗಳು ತಾಲೀಮು ನಡೆಸಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.