ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ
ನವದೆಹಲಿ: 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪು ಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಧ್ವಜಾರೋಹಣ ನೆರವೇರಿಸಿದರು.
ಕೇಸರಿ ಬಣ್ಣದ ಕೋಟು ಮತ್ತು ಪೇಟ ಧರಿಸಿದ್ದ ಪ್ರಧಾನಿ ಧ್ವಜಾರೋಹಣಕ್ಕೂ ಮೊದಲು ರಾಜ್‌ಘಾಟ್‌ನಲ್ಲಿರುವ ಮಹಾತ್ಮಾ ಗಾಂಧಿ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು.
ಇದೇ ವೇಳೆ, ಭಾರತೀಯ ವಾಯುಪಡೆಯ ಎರಡು Mi-17 ಹೆಲಿಕಾಪ್ಟರ್‌ಗಳು ಕೆಂಪು ಕೋಟೆಯ ಮೇಲೆ ಪುಷ್ಪಮಳೆ ಸುರಿಸಿದವು. ಒಂದು ಹೆಲಿಕಾಪ್ಟರ್ ಧ್ವಜದೊಂದಿಗೆ ಹಾರಿದರೆ, ಇನ್ನೊಂದು ಹೆಲಿಕಾಪ್ಟರ್‌ನಲ್ಲಿ ಆಪರೇಷನ್ ಸಿಂಧೂರ ಬ್ಯಾನರ್ ಅನ್ನು ಪ್ರದರ್ಶಿಸಲಾಗಿದೆ.
ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ದೇಶದ ಜನತೆಗೆ ಸ್ವಾತಂತ್ರ್ಯ ದಿನದ ಶುಭ ಕೋರಿರುವ ಮೋದಿ, ‘ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸಲು ಎಲ್ಲರೂ ಇನ್ನಷ್ಟು ಶ್ರಮಿಸಬೇಕು. ಈ ದಿನ ನಮ್ಮ ಸ್ವಾತಂತ್ರ್ಯ ಹೋರಾಟಗಾರರ ಕನಸುಗಳನ್ನು ನನಸಾಗಿಸಲು ಮತ್ತು ವಿಕ್ಷಿತ ಭಾರತವನ್ನು ನಿರ್ಮಿಸಲು ಇನ್ನಷ್ಟು ಶ್ರಮಿಸಲು ನಮಗೆ ಸ್ಫೂರ್ತಿ ನೀಡಲಿ. ಎಲ್ಲರಿಗೂ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು’ ಎಂದು ಬರೆದುಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.