ಸಾವು
ಪ್ರಾತಿನಿಧಿಕ ಚಿತ್ರ
ಗುರುಗ್ರಾಮ: ಬಾದ್‌ಶಾಪುರ್ ವಿಧಾನಸಭಾ ಕ್ಷೇತ್ರದ ಪಕ್ಷೇತರ ಶಾಸಕ ರಾಕೇಶ್ ದೌಲತಾಬಾದ್ ಹೃದಯಾಘಾತದಿಂದ ಶನಿವಾರ ಬೆಳಿಗ್ಗೆ ನಿಧನರಾದರು.
ಅವರಿಗೆ 45 ವರ್ಷ ವಯಸ್ಸಾಗಿತ್ತು.
ಬೆಳಗ್ಗೆ ತಮ್ಮ ನಿವಾಸದಲ್ಲಿ ಕುಸಿದುಬಿದ್ದ ಅವರನ್ನು ಇಲ್ಲಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅವರು ಬದುಕುಳಿಯಲಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
2019ರ ವಿಧಾನಸಭೆ ಚುನಾವಣೆಯಲ್ಲಿ ಅವರು ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ದಾಖಲಿಸಿದ್ದರು. ನಂತರ ಬಿಜೆಪಿ ಸರ್ಕಾರಕ್ಕೆ ಬೆಂಬಲ ಸೂಚಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.