ADVERTISEMENT

Covid-19 India Update: ಚೇತರಿಕೆಗಿಂತ ಹೊಸ ಪ್ರಕರಣಗಳ ಸಂಖ್ಯೆ ಮತ್ತೆ ಹೆಚ್ಚಳ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 22 ಜುಲೈ 2021, 4:08 IST
Last Updated 22 ಜುಲೈ 2021, 4:08 IST
ರಾಂಚಿಯಲ್ಲಿ ಆರೋಗ್ಯ ಕಾರ್ಯಕರ್ತರು ಕೋವಿಡ್‌–19 ಲಸಿಕೆ ಹಾಕುತ್ತಿರುವುದು–ಪಿಟಿಐ ಚಿತ್ರ
ರಾಂಚಿಯಲ್ಲಿ ಆರೋಗ್ಯ ಕಾರ್ಯಕರ್ತರು ಕೋವಿಡ್‌–19 ಲಸಿಕೆ ಹಾಕುತ್ತಿರುವುದು–ಪಿಟಿಐ ಚಿತ್ರ   

ನವದೆಹಲಿ: ಭಾರತದಲ್ಲಿ ಗುರುವಾರ 24 ಗಂಟೆಗಳ ಅಂತರದಲ್ಲಿ ಕೋವಿಡ್‌–19 ದೃಢಪಟ್ಟ 41,383 ಹೊಸ ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ ಸೋಂಕಿನಿಂದ 507 ಮಂದಿ ಮೃತಪಟ್ಟಿದ್ದು, 38,652 ಮಂದಿ ಗುಣಮುಖರಾಗಿದ್ದಾರೆ.

ಕೋವಿಡ್‌ ಚೇತರಿಕೆ ಪ್ರಮಾಣಕ್ಕಿಂತ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದೆ.

ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 3,12,57,720 ಆಗಿದ್ದು, ಈ ಪೈಕಿ 3,04,29,339 ಮಂದಿ ಚೇತರಿಸಿಕೊಂಡಿದ್ದಾರೆ ಹಾಗೂ ಕೋವಿಡ್‌ ಕಾರಣಗಳಿಂದಾಗಿ 4,18,987 ಮಂದಿ ಮೃತಪಟ್ಟಿದ್ದಾರೆ. ಪ್ರಸ್ತುತ 4,09,394 ಪ್ರಕರಣಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿಯಿಂದ ತಿಳಿದು ಬಂದಿದೆ.

ADVERTISEMENT

ದೇಶದಾದ್ಯಂತ ಈವರೆಗೂ 41,78,51,151 ಡೋಸ್‌ ಲಸಿಕೆ ಹಾಕಲಾಗಿದೆ.

ಕೇಂದ್ರ ಸರ್ಕಾರದ ತಪ್ಪು ನಿರ್ಧಾರಗಳಿಂದ ಕೋವಿಡ್‌ ಎರಡನೇ ಅಲೆಯ ಸಂದರ್ಭದಲ್ಲಿ ಸುಮಾರು 50 ಲಕ್ಷ ಭಾರತೀಯರು ಮೃತಪಟ್ಟಿದ್ದಾರೆ ಎಂದು ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಬುಧವಾರ ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.