ADVERTISEMENT

ಕೋವಿಡ್‌ ಲಸಿಕೆ: ಒಂದೇ ದಿನದಲ್ಲಿ 88.13 ಲಕ್ಷ ಡೋಸ್‌ ನೀಡಿಕೆ

ಪಿಟಿಐ
Published 18 ಆಗಸ್ಟ್ 2021, 3:44 IST
Last Updated 18 ಆಗಸ್ಟ್ 2021, 3:44 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ದೇಶದಲ್ಲಿ ಆಗಸ್ಟ್‌ 16ರಂದು 88.13 ಲಕ್ಷಕ್ಕೂ ಹೆಚ್ಚು ಜನರಿಗೆ ಕೋವಿಡ್‌ 19ರ ಲಸಿಕೆ ನೀಡಲಾಗಿದೆ. ಇದು ಇಲ್ಲಿಯವರೆಗೆ ಒಂದು ದಿನದಲ್ಲಿ ನೀಡಿರುವ ಅತ್ಯಧಿಕ ಪ್ರಮಾಣದ ಲಸಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಆರೋಗ್ಯ ಸಚಿವ ಮನ್‌ಸುಖ್‌ ಮಾಂಡವೀಯ, ‘ಒಂದೇ ದಿನದಲ್ಲಿ ಹೆಚ್ಚಿನ ಜನರಿಗೆ ಲಸಿಕೆ ನೀಡಿದ ದಾಖಲೆಯನ್ನು ಭಾರತ ಮಾಡಿದೆ. ಸೋಮವಾರ ವಿಶ್ವದ ಅತಿದೊಡ್ಡ ಲಸಿಕಾ ಅಭಿಯಾನ ನಡೆದಿದೆ. ಇದಕ್ಕಾಗಿ ಅಭಿನಂದನೆಗಳು’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT