ADVERTISEMENT

ಕೋವಿಡ್‌: ದೇಶದಲ್ಲಿ 30,757 ಹೊಸ ಪ್ರಕರಣ

ಪಿಟಿಐ
Published 17 ಫೆಬ್ರುವರಿ 2022, 15:08 IST
Last Updated 17 ಫೆಬ್ರುವರಿ 2022, 15:08 IST
   

ನವದೆಹಲಿ: ಗುರುವಾರ ಬೆಳಿಗ್ಗೆ 8ಕ್ಕೆ ಲಭ್ಯವಾಗಿರುವ ಮಾಹಿತಿ ಪ್ರಕಾರ ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ ಹೊಸದಾಗಿ30,757 ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, 541 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಒಟ್ಟು ಸೋಂಕಿತರ ಸಂಖ್ಯೆ 4,27,54,315ಕ್ಕೆ ತಲುಪಿದೆ. ಕಳೆದ 24 ಗಂಟೆಗಳಲ್ಲಿ ದೇಶದ ಒಟ್ಟು ಕೋವಿಡ್‌ ಸಕ್ರಿಯ ಪ್ರಕರಣಗಳ ಪೈಕಿ 37,322 ಕಡಿಮೆಯಾಗಿದ್ದು, ಸದ್ಯ 3,32,918 ಕೋವಿಡ್‌ ಪ್ರಕರಣಗಳಿವೆ. ಇದುವರೆಗೆ 5,10,413 ಮಂದಿ ಸೋಂಕಿನಿಂದ ಸಾವಿಗೀಡಾಗಿದ್ದಾರೆ. ಪ್ರಸ್ತುತ ಸೋಂಕು ದೃಢ ಪ್ರಮಾಣ ಶೇ 0.78 ರಷ್ಟಿದ್ದು, ಚೇತರಿಕೆ ಪ್ರಮಾಣ ಶೇ 98.03ಕ್ಕೆ ಏರಿಕೆಯಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ದೇಶದಾದ್ಯಂತ ನಡೆಯುತ್ತಿರುವ ಲಸಿಕೆ ಅಭಿಯಾನದಲ್ಲಿ 174.24 ಕೋಟಿ ಲಸಿಕೆ ನೀಡಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.