ADVERTISEMENT

ಕೋವಿಡ್‌: ದೇಶದಲ್ಲಿ 32,937 ಹೊಸ ಪ್ರಕರಣಗಳು ಪತ್ತೆ; ಸಕ್ರಿಯ ಪ್ರಕರಣಗಳು ಇಳಿಕೆ

ಪಿಟಿಐ
Published 16 ಆಗಸ್ಟ್ 2021, 6:49 IST
Last Updated 16 ಆಗಸ್ಟ್ 2021, 6:49 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದೇಶದಲ್ಲಿ ಸೋಮವಾರ ಬೆಳಿಗ್ಗೆ 8ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ 32,937 ಕೋವಿಡ್‌ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 3,22,25,513ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ತಿಳಿಸಿದೆ.

ಇದೇ ಅವಧಿಯಲ್ಲಿ 417 ಮಂದಿ ಸೋಂಕಿನಿಂದ ಸಾವಿಗೀಡಾಗಿದ್ದು, ಮೃತರ ಒಟ್ಟು ಸಂಖ್ಯೆಯು 4,31,642ಕ್ಕೆ ಏರಿದೆ. ಆದರೆ, ಸಕ್ರಿಯ ‍ಪ್ರಕರಣಗಳ ಸಂಖ್ಯೆ 3,81,947 ಇಳಿದಿದ್ದು, ಇದು 145 ದಿನಗಳ ಬಳಿಕ ವರದಿಯಾದ ಅತಿ ಕಡಿಮೆ ಸಕ್ರಿಯ ಪ್ರಕರಣಗಳಾಗಿವೆ. ಇದು ಒಟ್ಟು ಪ್ರಕರಣಗಳ ಪೈಕಿ ಶೇಕಡ 1.18ರಷ್ಟು ಪಾಲನ್ನು ಹೊಂದಿದೆ.

ದೇಶದಲ್ಲಿ ಚೇತರಿಕೆ ಪ್ರಮಾಣವು ಶೇಕಡ 97.48ರಷ್ಟಿದೆ. ಇದು ಕಳೆದ ವರ್ಷ ಮಾರ್ಚ್‌ ತಿಂಗಳಿನಿಂದ ಈವರೆಗಿನ ಅತಿ ಗರಿಷ್ಠ ಚೇತರಿಕೆ ಪ್ರಮಾಣವಾಗಿದೆ. ಇನ್ನು, ಭಾರತದ ದೈನಂದಿನ ಸೋಂಕು ದೃಢ ಪ್ರಮಾಣವು ಶೇಕಡ 2.79ರಷ್ಟಿದೆ.

ADVERTISEMENT

ದೇಶದಲ್ಲಿ ಮರಣ ಪ್ರಮಾಣವು ಶೇಕಡ 1.34 ರಷ್ಟಿದ್ದು, ಈವರೆಗೆ 3,14,11,924 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಭಾನುವಾರ 11,81,212 ಮಂದಿಯನ್ನು ಕೋವಿಡ್‌ ಪರೀಕ್ಷೆಗೆ ಒಳಪಡಿಸಲಾಗಿದೆ. ಈವರೆಗೆ ದೇಶದಲ್ಲಿ 49,48,05,652 ಪರೀಕ್ಷೆಗಳನ್ನು ಕೈಗೊಳ್ಳಲಾಗಿದೆ. ಜತೆಗೆ, 54.58 ಕೋಟಿ ಡೋಸ್‌ ಲಸಿಕೆಯನ್ನು ವಿತರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.