ADVERTISEMENT

ಜುಲೈ 19ರಂದು ‘ಇಂಡಿಯಾ’ ಒಕ್ಕೂಟ ನಾಯಕರ ಸಭೆ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಆಯೋಜನೆ

​ಪ್ರಜಾವಾಣಿ ವಾರ್ತೆ
Published 17 ಜುಲೈ 2025, 13:36 IST
Last Updated 17 ಜುಲೈ 2025, 13:36 IST
ಮಲ್ಲಿಕಾರ್ಜುನ ಖರ್ಗೆ 
ಮಲ್ಲಿಕಾರ್ಜುನ ಖರ್ಗೆ    

ನವದೆಹಲಿ: ಲೋಕಸಭೆ ಚುನಾವಣೆ ನಡೆದ ಬಳಿಕ ಇದೇ ಮೊದಲ ಬಾರಿಗೆ ‘ಇಂಡಿಯಾ’ ಒಕ್ಕೂಟದ ನಾಯಕರ ಸಭೆಯು ಜುಲೈ 19ರಂದು ಸಂಜೆ ನಡೆಯಲಿದೆ. 

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಸಭೆ ಆಯೋಜಿಸಲಾಗಿದೆ. ಕಳೆದ ವರ್ಷ ಜೂನ್‌ 1ರ ಬಳಿಕ ನಡೆಯುತ್ತಿರುವ ಮೊದಲ ‘ಇಂಡಿಯಾ’ ಒಕ್ಕೂಟದ ಸಭೆ ಇದಾಗಿದೆ. 

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಹಾಗೂ ಆಮ್‌ ಆದ್ಮಿ ಪಕ್ಷ (ಎಎಪಿ) ಈ ಸಭೆಯಲ್ಲಿ ಭಾಗಿಯಾಗುವ ಸಾಧ್ಯತೆ ಕಡಿಮೆ.

ADVERTISEMENT

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ತಮಿಳುನಾಡು ಮುಖ್ಯಮಂತ್ರಿ, ಡಿಎಂಕೆ ಮುಖ್ಯಸ್ಥ ಎಂ.ಕೆ ಸ್ಟಾಲಿನ್ ಸೇರಿದಂತೆ ಇತರ ಪಕ್ಷಗಳ ನಾಯಕರೊಂದಿಗೆ ಸಭೆ ಕುರಿತು ಮಾತನಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು ವಿವಿಧ ಪಕ್ಷಗಳ ನಾಯಕರನ್ನು ಸಂಪರ್ಕಿಸಿ ಸಭೆಗೆ ಆಹ್ವಾನಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.