ನವದೆಹಲಿ: ವಿಶ್ವಸಂಸ್ಥೆ ಭದ್ರತಾ ಸಮಿತಿಯ ಕಾರ್ಯಸೂಚಿ ಕುರಿತಾದ ಪ್ರಮುಖ ವಿಷಯಗಳ ಬಗ್ಗೆ ನಿಕಟವಾಗಿ ಕೆಲಸ ಮಾಡಲು ಭಾರತ ಮತ್ತು ರಷ್ಯಾ ನಿರ್ಧರಿಸಿದೆ.
‘ರಷ್ಯಾ ಮತ್ತು ಭಾರತವು ವಿಶ್ವಸಂಸ್ಥೆಯ ಕಾರ್ಯಸೂಚಿಯಲ್ಲಿನ ಪ್ರಮುಖ ವಿಷಯಗಳ ಕುರಿತಾಗಿ ಮಾಸ್ಕೊದಲ್ಲಿ ಮಂಗಳವಾರ ದ್ವಿಪಕ್ಷೀಯ ಸಮಾಲೋಚನೆ ನಡೆಸಿದೆ. ಈ ವೇಳೆ ಕಾರ್ಯಸೂಚಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಜಂಟಿಯಾಗಿ ಕೆಲಸ ಮಾಡಲು ಉಭಯ ರಾಷ್ಟ್ರಗಳು ನಿರ್ಧರಿಸಿವೆ’ ಎಂದು ವಿದೇಶಾಂಗ ಸಚಿವಾಲಯ (ಎಂಇಎ) ಹೇಳಿದೆ.
‘ವಿಶ್ವಸಂಸ್ಥೆಯ ಭದ್ರತಾ ಸಮಿತಿಯ ಕಾರ್ಯಸೂಚಿ ಬಗೆಗಿನ ಉಭಯ ಪಕ್ಷೀಯ ಸಮಾಲೋಚನೆಯನ್ನು ಎರಡೂ ದೇಶಗಳು ಶ್ಲಾಘಿಸಿವೆ. ಈ ಮೂಲಕ ಎರಡೂ ರಾಷ್ಟ್ರಗಳ ಸಂಬಂಧ ಇನ್ನಷ್ಟು ಸದೃಢಗೊಳ್ಳಲಿದೆ’ ಎಂದು ಸಚಿವಾಲಯ ಹೇಳಿದೆ.
ವಿಶ್ವಸಂಸ್ಥೆಯ ಭದ್ರತಾ ಸಮಿತಿಯಲ್ಲಿ ಭಾರತದ ತಾತ್ಕಾಲಿಕ ಸದಸ್ಯತ್ವದ (ಎರಡು ವರ್ಷಗಳ) ಅವಧಿ ಜನವರಿ 1 ರಂದು ಪ್ರಾರಂಭಗೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.