ADVERTISEMENT

ಪಾಕ್ ಸೇನೆಯಿಂದ ಅಪ್ರಚೋದಿತ ದಾಳಿ; ಭಾರತದ ಜೂನಿಯರ್ ಕಮಿಷನ್ಡ್ ಆಫೀಸರ್‌ ಹುತಾತ್ಮ

ಏಜೆನ್ಸೀಸ್
Published 2 ಸೆಪ್ಟೆಂಬರ್ 2020, 5:39 IST
Last Updated 2 ಸೆಪ್ಟೆಂಬರ್ 2020, 5:39 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ವಾಸ್ತವ ನಿಯಂತ್ರಣ ರೇಖೆ (ಎಲ್‌ಒಸಿ) ಉದ್ದಕ್ಕೂ ಪಾಕಿಸ್ತಾನದ ಸೈನಿಕರು ನಡೆಸಿದ ಗುಂಡಿನ ದಾಳಿಯಲ್ಲಿ ಭಾರತದ ಜೂನಿಯರ್ ಕಮಿಷನ್ಡ್ ಆಫೀಸರ್‌(ಜೆಸಿಒ) ಹುತಾತ್ಮರಾಗಿದ್ದಾರೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ.

ಪಾಕಿಸ್ತಾನದ ಪಡೆಗಳು ಕದನ ವಿರಾಮವನ್ನು ಉಲ್ಲಂಘಿಸಿ ಕೇರಿ ಸೆಕ್ಟರ್‌ನ ಫಾರ್ವರ್ಡ್ ಪೋಸ್ಟ್‌ಗಳಿಗೆ ಗುಂಡು ಹಾರಿಸಿದ್ದು, ಭಾರತೀಯ ಸೇನೆಯಿಂದಲೂ ಪ್ರತ್ಯುತ್ತರವಾಗಿ ಗುಂಡಿನ ದಾಳಿ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಪಾಕಿಸ್ತಾನದ ಗುಂಡಿನ ದಾಳಿಯಲ್ಲಿ ಜೆಸಿಒ ಗಂಭೀರವಾಗಿ ಗಾಯಗೊಂಡಿದ್ದು, ಬಳಿಕ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪಾಕಿಸ್ತಾನದ ಸೇನೆಯಲ್ಲಿಯೂ ಸಾವು ನೋವು ಸಂಭವಿಸಿದ್ದು, ನಿಖರವಾದ ವಿವರಗಳನ್ನು ನಿರೀಕ್ಷಿಸಲಾಗಿದೆ.

ADVERTISEMENT

ಕಳೆದ ನಾಲ್ಕು ದಿನಗಳಲ್ಲಿ ಎರಡನೇ ಭಾರಿ ಕದನ ವಿರಾಮ ಉಲ್ಲಂಘಿಸಿ ದಾಳಿ ನಡೆದಿದೆ. ಆಗಸ್ಟ್ 30 ರಂದು ರಜೌರಿ ಜಿಲ್ಲೆಯ ನೌಶೇರಾ ಸೆಕ್ಟರ್‌ನಲ್ಲಿ ಜೆಸಿಒ ಒಬ್ಬರನ್ನು ಹತ್ಯೆಮಾಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.