ADVERTISEMENT

ಜೈಷ್‌–ಇ–ಮೊಹಮ್ಮದ್‌ ಮುಖ್ಯಸ್ಥ ಮಸೂದ್‌ ಅಜ ವಿರುದ್ಧ ಕ್ರಮ: ಪಾಕ್‌ಗೆ ಭಾರತ ಆಗ್ರಹ

ಪಿಟಿಐ
Published 6 ಡಿಸೆಂಬರ್ 2024, 15:57 IST
Last Updated 6 ಡಿಸೆಂಬರ್ 2024, 15:57 IST
ರಣಧೀರ್‌ ಜೈಸ್ವಾಲ್‌
ರಣಧೀರ್‌ ಜೈಸ್ವಾಲ್‌   

ನವದೆಹಲಿ: ಭಯೋತ್ಪಾದಕ ಸಂಘಟನೆ ಜೈಷ್‌–ಇ–ಮೊಹಮ್ಮದ್‌ ಮುಖ್ಯಸ್ಥ ಮಸೂದ್‌ ಅಜರ್‌ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪಾಕಿಸ್ತಾನಕ್ಕೆ ಭಾರತ ಒತ್ತಾಯಿಸಿದೆ. ‌ಪಾಕಿಸ್ತಾನದ ಬಹವಾಲ್ಪುರದಲ್ಲಿ ಇತ್ತೀಚೆಗೆ ನಡೆದ ಸಾರ್ವಜನಿಕ ಸಭೆಯೊಂದರಲ್ಲಿ ಅಜರ್‌ ಭಾಷಣ ಮಾಡಿದ್ದಾನೆ ಎಂದು ವರದಿಗಳಾಗಿವೆ.

‘ಈ ಕುರಿತು ಪ್ರತಿಕ್ರಿಯಿಸಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್‌ ಜೈಸ್ವಾಲ್‌ ‘ಇದು ನಿಜವಾಗಿದ್ದಲ್ಲಿ ಭಯೋತ್ಪಾದನೆ ಕುರಿತು ಪಾಕಿಸ್ತಾನದ ದ್ವಿಮುಖ ಧೋರಣೆಯನ್ನು ಬಹಿರಂಗಪಡಿಸುತ್ತದೆ. ಭಾರತದ ಗಡಿ ಬಳಿ ನಡೆದಿರುವ ಭಯೋತ್ಪಾದಕ ಚಟುವಟಿಕೆಗಳಲ್ಲಿ ಮಸೂದ್‌ ಭಾಗಿಯಾಗಿದ್ದಾನೆ. ಆತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ನಾವು ಆಗ್ರಹಿಸುತ್ತೇವೆ’ ಎಂದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT