ನವದೆಹಲಿ: ಇಥಿಯೋಪಿಯಾ ವಿಮಾನ ದುರಂತದ ಬೆನ್ನಲ್ಲೇ, ’ಬೋಯಿಂಗ್ 737 ಮ್ಯಾಕ್ಸ್ 8‘ ವಿಮಾನಗಳ ಹಾರಾಟವನ್ನು ಭಾರತದಲ್ಲಿ ನಿಷೇಧಿಸಲಾಗಿದೆ.
ಸ್ಪೈಸ್‌ಜೆಟ್ ಸಂಸ್ಥೆಯಲ್ಲಿ ಈ ಮಾದರಿಯ 12 ವಿಮಾನ ಹಾಗೂ ಜೆಟ್ ಏರ್‌ವೇಸ್‌ನಲ್ಲಿ ಇಂತಹ 5 ವಿಮಾನಗಳಿವೆ.
’ಬೋಯಿಂಗ್ 737 ವಿಮಾನಗಳ ಹಾರಾಟವನ್ನು ತಕ್ಷಣದಿಂದ ಸ್ಥಗಿತಗೊಳಿಸುವಂತೆ ನಾಗರಿಕ ವಿಮಾನಯಾನ ನಿರ್ದೇಶನಾಲಯ ನಿರ್ಧಾರ ತೆಗೆದುಕೊಂಡಿದೆ. ಈ ವಿಮಾನಗಳಲ್ಲಿ ಸೂಕ್ತ ಬದಲಾವಣೆ ಹಾಗೂ ಸುರಕ್ಷಾ ಕಾರ್ಯಾಚರಣೆ ಖಾತರಿಪಡಿಸಿದ ಬಳಿಕವೇ ಹಾರಾಟಕ್ಕೆ ಅನುವು ಮಾಡಿಕೊಡಲಾಗುತ್ತದೆ‘ ಎಂದು ನಾಗರಿಕ ವಿಮಾನಯಾನ ಇಲಾಖೆ ಟ್ವಿಟರ್‌ನಲ್ಲಿ ಸ್ಪಷ್ಟಪಡಿಸಿದೆ.
ಮಾರ್ಚ್ 11ರಂದು ಇಥಿಯೋಪಿಯಾದ ಆಡಿಸ್ ಅಬಾಬದಿಂದ ಕೀನ್ಯಾದ ನೈರೋಬಿಗೆ ಹೊರಟಿದ್ದ ಇಥಿಯೋಪಿಯನ್ ಏರ್‌ಲೈನ್ಸ್‌ನ ಬೋಯಿಂಗ್ 737 ವಿಮಾನ ಪತನಗೊಂಡು, ಅದರಲ್ಲಿದ್ದ 157 ಮಂದಿ ಮೃತಪಟ್ಟಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.