ADVERTISEMENT

ಗಡಿ ಬಿಕ್ಕಟ್ಟು ವಿಚಾರದಲ್ಲಿ ಭಾರತವನ್ನು ಪರೀಕ್ಷಿಸಲಾಗುತ್ತಿದೆ: ಸಚಿವ ಜೈಶಂಕರ್‌

ಪಿಟಿಐ
Published 12 ಡಿಸೆಂಬರ್ 2020, 14:34 IST
Last Updated 12 ಡಿಸೆಂಬರ್ 2020, 14:34 IST
ಜೈಶಂಕರ್‌
ಜೈಶಂಕರ್‌   

ನವದೆಹಲಿ: ಪೂರ್ವ ಲಡಾಖ್‌ನಲ್ಲಿ ಚೀನಾ ಜೊತೆಗಿನ ಗಡಿ ಬಿಕ್ಕಟ್ಟಿನಲ್ಲಿ ಭಾರತವನ್ನು ಪರೀಕ್ಷಿಸಲಾಗುತ್ತಿದ್ದು, ಈ ಸ್ಥಿತಿಯನ್ನು ಸಮರ್ಥವಾಗಿ ಎದುರಿಸಲಿರುವ ಭಾರತವು ರಾಷ್ಟ್ರೀಯ ಭದ್ರತಾ ಸವಾಲನ್ನು ನಿಭಾಯಿಸಲಿದೆ ಎಂದು ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಶನಿವಾರ ಹೇಳಿದರು.

ಭಾರತೀಯ ವಾಣಿಜ್ಯೋದ್ಯಮ ಮಹಾಸಂಘಗಳ ಒಕ್ಕೂಟದ (ಫಿಕಿ) ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದ ಜೈಶಂಕರ್‌, ಪೂರ್ವ ಲಡಾಖ್‌ನಲ್ಲಿ ನಡೆದ ಘಟನೆಯು ಚೀನಾ ಹಿತಾಸಕ್ತಿಗೆ ಪೂರಕವಾಗಿರಲಿಲ್ಲ. ಆದರೆ ಭಾರತದ ಜನರ ಭಾವನೆಯ ಮೇಲೆ ತೀವ್ರವಾಗಿ ಪರಿಣಾಮ ಬೀರಿತ್ತು’ ಎಂದರು.

ವಾಸ್ತವ ನಿಯಂತ್ರಣ ರೇಖೆಯಲ್ಲಿ(ಎಲ್‌ಎಸಿ) ನಡೆದ ಘಟನೆಯು ದುಗುಡಗೊಳಿಸುವಂತಹದು ಎಂದು ಉಲ್ಲೇಖಿಸಿದ ಜೈಶಂಕರ್‌, ‘ಎರಡೂ ರಾಷ್ಟ್ರಗಳ ನಡುವೆ ಉತ್ತಮ ಸಂಬಂಧಕ್ಕೆ ಎರಡೂ ಕಡೆಯಿಂದಲೂ ಹೆಚ್ಚಿನ ಕೆಲಸಗಳು ನಡೆದಿವೆ. ಆದರೆ ಈ ವರ್ಷ ನಡೆದ ಘಟನೆಯು ಇದಕ್ಕೆ ಪೂರಕವಾಗಿರಲಿಲ್ಲ. ಇಷ್ಟು ವರ್ಷಗಳಿಂದ ಕಾಪಾಡಿಕೊಂಡು ಬಂದಂತಹ ಸೌಹಾರ್ದತೆಯು ನಾಶವಾಗುತ್ತದೆಯೇ ಎನ್ನುವ ಆತಂಕ ಎದುರಾಗಿದೆ. ಹೌದು, ನಮ್ಮನ್ನು ಪರೀಕ್ಷಿಸಲಾಗುತ್ತಿದೆ. ಇದನ್ನು ಮೆಟ್ಟಿನಿಲ್ಲುವ ಭರವಸೆಯು ನನಗಿದೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.