ಪ್ರಾತಿನಿಧಿಕ ಚಿತ್ರ
ಪಟ್ನಾ: ಬಿಹಾರದಲ್ಲಿ ‘ಇಂಡಿಯಾ’ ಮೈತ್ರಿಕೂಟದ ಮಿತ್ರಪಕ್ಷವಾದ ವಿಕಾಸ್‌ಶೀಲ್ ಇನ್ಸಾನ್ ಪಕ್ಷದ (ವಿಐಪಿ) ಮುಖ್ಯಸ್ಥ ಮುಖೇಶ್ ಸಹಾನಿ ಅವರ ತಂದೆಯನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಿಹಾರದಲ್ಲಿ ದರ್ಬಂಗಾ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಮುಖೇಶ್ ಸಹಾನಿ ಅವರ ತಂದೆ ಜಿತನ್ ಸಹಾನಿಯ ಮೃತದೇಹ ವಿರೂಪಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಜಗನ್ನಾಥ್ ರೆಡ್ಡಿ ಹೇಳಿದ್ದಾರೆ ಎಂದು ‘ಎನ್‌ಡಿಟಿವಿ’ ವರದಿ ಮಾಡಿದೆ.
ಘಟನಾ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ರೆಡ್ಡಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.