ADVERTISEMENT

ಇಂಡಿಯಾ ಕೂಟದಲ್ಲಿ ಪ್ರಧಾನಿಯಾಗುವ ನಾಯಕರಿಲ್ಲ: ಅಮಿತ್‌ ಶಾ

ಪಿಟಿಐ
Published 22 ಮೇ 2024, 14:35 IST
Last Updated 22 ಮೇ 2024, 14:35 IST
ಅಮಿತ್‌ ಶಾ
ಅಮಿತ್‌ ಶಾ   

ಘಾಟಲ್‌ (ಪಶ್ಚಿಮ ಬಂಗಾಳ): ವಿರೋಧ ಪಕ್ಷಗಳ ‘ಇಂಡಿಯಾ’ ಒಕ್ಕೂಟದಲ್ಲಿ ಪ್ರಧಾನಿಯಾಗುವಂತಹ ನಾಯಕರಿಲ್ಲ ಎಂದು ಕೇಂದ್ರ ಗೃಹಸಚಿವ ಅಮಿತ್‌ ಶಾ ಅವರು ಬುಧವಾರ ಹೇಳಿದರು. 

ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ಅವರು, ‘ಇಂಡಿಯಾ’ ಒಕ್ಕೂಟದ ನಾಯಕರು ಕೇವಲ ತಮ್ಮ ವಂಶವನ್ನಷ್ಟೇ ಮುನ್ನಡೆಸಲು ಬಯಸುತ್ತಾರೆ. ದೇಶದ ನಾಯಕತ್ವ ವಹಿಸುವ ಅಥವಾ ಅಭಿವೃದ್ಧಿಯ ಆಶಯ ಹೊಂದಿರುವ ಮುಖಂಡರು ಆ ಒಕ್ಕೂಟದಲ್ಲಿಲ್ಲ ಎಂದು ಟೀಕಿಸಿದರು. 

‘ಪಾಕ್‌ ಆಕ್ರಮಿತ ಕಾಶ್ಮೀರವು ನಮ್ಮ ದೇಶದ ಭಾಗವಾಗಿದ್ದು, ನಾವು ಅದನ್ನು ಮರಳಿ ಪಡೆಯುತ್ತೇವೆ’ ಎಂದು ಪುನರುಚ್ಚರಿಸಿದರು.

ADVERTISEMENT

ಶರದ್‌ ಪವಾರ್‌ ಅವರು ತಮ್ಮ ಪುತ್ರಿಯನ್ನು ಮುಖ್ಯಮಂತ್ರಿ ಮಾಡಲು ಬಯಸುತ್ತಾರೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ಸೋದರಳಿಯನನ್ನು ಹಾಗೂ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್‌ ಅವರು ತಮ್ಮ ಮಗನನ್ನು ಉತ್ತರಾಧಿಕಾರಿಯನ್ನಾಗಿ ಮಾಡಲು ಇಚ್ಛಿಸುತ್ತಿದ್ದಾರೆ. ಸೋನಿಯಾ ಗಾಂಧಿ ಅವರು ರಾಹುಲ್‌ ಗಾಂಧಿ ಪ್ರಧಾನಿಯಾಗಬೇಕೆಂದು ಬಯಸುತ್ತಿದ್ದಾರೆ. ಇನ್ನೊಂದೆಡೆ ಪ್ರಧಾನಿ ನರೇಂದ್ರ ಮೋದಿ ಅವರು ಇಡೀ ದೇಶವೇ ತಮ್ಮ ಕುಟುಂಬ ಎಂದು ಭಾವಿಸುತ್ತಿದ್ದಾರೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.