ADVERTISEMENT

Lok Sabha | ಜಮ್ಮು, ಲಡಾಖ್‌ನ ಎಲ್ಲಾ ಸ್ಥಾನಗಳಲ್ಲಿ ‘ಇಂಡಿಯಾ’ಗೆ ಗೆಲುವು: ಸೋಲಂಕಿ

ಪಿಟಿಐ
Published 18 ಜನವರಿ 2024, 2:32 IST
Last Updated 18 ಜನವರಿ 2024, 2:32 IST
<div class="paragraphs"><p>ಇಂಡಿಯಾ ಮೈತ್ರಿಕೂಟ</p></div>

ಇಂಡಿಯಾ ಮೈತ್ರಿಕೂಟ

   

ಶ್ರೀನಗರ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ‘ಇಂಡಿಯಾ’ ಮೈತ್ರಿಕೂಟವು ಕೇಂದ್ರಾಡಳಿತ ಪ್ರದೇಶಗಳಾದ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್‌ನಲ್ಲಿನ ಎಲ್ಲಾ ಸ್ಥಾನಗಳಲ್ಲಿಯು ಗೆಲುವು ಸಾಧಿಸಲಿದೆ ಎಂದು ಜಮ್ಮು ಮತ್ತು ಕಾಶ್ಮೀರ ಕಾಂಗ್ರೆಸ್‌ ಉಸ್ತುವಾರಿ ಭರತ್‌ ಸಿಂಗ್‌ ಸೋಲಂಕಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇಂಡಿಯಾ ಮೈತ್ರಿಕೂಟವು ಜಮ್ಮು ಮತ್ತು ಕಾಶ್ಮೀರದ ಐದು ಲೋಕಸಭಾ ಸ್ಥಾನಗಳಲ್ಲಿ ಗೆಲುವು ಸಾಧಿಸುವುದು ಮಾತ್ರವಲ್ಲದೆ, ಲಡಾಖ್‌ನ ಎಲ್ಲಾ ಸ್ಥಾನಗಳನ್ನು ತನ್ನದಾಗಿಸಿಕೊಳ್ಳಲಿದೆ ಎಂದು ಸೋಲಂಕಿ ಹೇಳಿದರು.

ADVERTISEMENT

ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಹಣದುಬ್ಬರ ಮತ್ತು ನಿರುದ್ಯೋಗದಂತಹ ಪ್ರಮುಖ ಸಮಸ್ಯೆಗಳನ್ನು ಬಿಜೆಪಿ ನಿರ್ಲಕ್ಷಿಸುತ್ತಿದೆ ಎಂದು ಆರೋಪಿಸಿದರು. ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿಯ ಕೊಡುಗೆಯನ್ನು ಪ್ರಶ್ನಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರವು ಜಮ್ಮು ಮತ್ತು ಕಾಶ್ಮೀರದಲ್ಲಿ ನಿರುದ್ಯೋಗವನ್ನು ಹೆಚ್ಚಿಸಿದೆ ಎಂದು ಕಾಂಗ್ರೆಸ್‌ ಅಧ್ಯಕ್ಷ ವಿಕರ್‌ ರಸೋಲ್‌ ವಾನಿ ವಾಗ್ದಾಳಿ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.