ADVERTISEMENT

Iran-Israel Conflict: ಸಂಘರ್ಷ ಕೊನೆಗೊಳಿಸಿ, ಸಾರ್ವಭೌಮತೆ ಕಾಪಾಡಿ: ಭಾರತ ಮನವಿ

ಪಿಟಿಐ
Published 28 ಫೆಬ್ರುವರಿ 2026, 15:50 IST
Last Updated 28 ಫೆಬ್ರುವರಿ 2026, 15:50 IST
   

ನವದೆಹಲಿ: ‘ಇರಾನ್‌ ಮೇಲಿನ ಸಂಘರ್ಷವನ್ನು ಕೊನೆಗೊಳಿಸಿ, ಸಾರ್ವಭೌಮತೆ ಹಾಗೂ ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಬೇಕು’ ಎಂದು ಭಾರತ ಮನವಿ ಮಾಡಿದೆ.

ಇರಾನ್‌ ಹಾಗೂ ಗಲ್ಫ್ ಬೆಳವಣಿಗೆಗಳ ಕುರಿತಂತೆ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ ಭಾರತ, ತೀವ್ರ ಕಳವಳ ಉಂಟುಮಾಡಿದೆ ಎಂದು ತಿಳಿಸಿದೆ.

‘ಎಲ್ಲಾ ಕಡೆಯವರು ಸಂಯಮದಿಂದ ವರ್ತಿಸಬೇಕು, ಉದ್ವಿಗ್ನತೆಯಿಂದ ತಪ್ಪಿಸಬೇಕು. ಜನರ ಪ್ರಾಣ ರಕ್ಷಣೆಗೆ ಆದ್ಯತೆ ನೀಡಬೇಕು’ ಎಂದು ವಿದೇಶಾಂಗ ಇಲಾಖೆಯು ತಿಳಿಸಿದೆ.

ADVERTISEMENT

ಪರಿಸ್ಥಿತಿ ಉದ್ವಿಗ್ನಗೊಳ್ಳದಂತೆ, ಮಾತುಕತೆ ಹಾಗೂ ರಾಜತಾಂತ್ರಿಕ ಮಾರ್ಗವನ್ನು ಅನುಸರಿಸಬೇಕು. ಸಾರ್ವಭೌಮತೆ ಹಾಗೂ ಪ್ರಾದೇಶಿಕ ಸಮಗ್ರತೆಯನ್ನು ಎಲ್ಲರೂ ಗೌರವಿಸಬೇಕು’ ಎಂದು ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.