ನವದೆಹಲಿ: ವ್ಯಾಪಾರ, ಯಾತ್ರೆ, ಸಮಾವೇಶಗಳಲ್ಲಿ ಭಾಗಿಯಾಗುವುದಕ್ಕೆ ಸೇರಿದಂತೆ ವಿವಿಧ ಕಾರಣಗಳಿಗಾಗಿ ಪಾಕಿಸ್ತಾನ ಪ್ರಜೆಗಳಿಗೆ ನೀಡಿದ್ದ 14 ಬಗೆಯ ವೀಸಾಗಳನ್ನು ರದ್ದು ಮಾಡಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ಶುಕ್ರವಾರ ಹೇಳಿದೆ.
ಪಹಲ್ಗಾಮ್‌ನಲ್ಲಿ ಉಗ್ರರು ದಾಳಿ ನಡೆಸಿ, ಪ್ರವಾಸಿಗರನ್ನು ಹತ್ಯೆ ಮಾಡಿದ್ದಕ್ಕೆ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ, ಭದ್ರತೆ ಕುರಿತಾದ ಸಂಪುಟ ಸಮಿತಿ ಸಭೆಯಲ್ಲಿ ಕೈಗೊಂಡ ನಿರ್ಧಾರದಂತೆ, ಪಾಕಿಸ್ತಾನ ಪ್ರಜೆಗಳಿಗೆ ನೀಡಿರುವ ವೀಸಾಗಳನ್ನು ರದ್ದು ಮಾಡಲಾಗಿದೆ.
‘ವೀಸಾ ರದ್ದತಿ ಕುರಿತ ಆದೇಶವು ಪಾಕಿಸ್ತಾನ ಪ್ರಜೆಗಳಿಗೆ ನೀಡಲಾಗಿರುವ ದೀರ್ಘಾವಧಿ ವೀಸಾ(ಎಲ್‌ಟಿವಿ), ರಾಜತಾಂತ್ರಿಕ ವೀಸಾಗಳಿಗೆ ಅನ್ವಯಿಸುವುದಿಲ್ಲ’ ಎಂದು ಗೃಹ ಸಚಿವಾಲಯ ಹೊರಡಿಸಿದರುವ ಆದೇಶದಲ್ಲಿ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.