ADVERTISEMENT

ದೇಶದ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಸೂರ್ಯ ಕಾಂತ್ ಪ್ರಮಾಣ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 24 ನವೆಂಬರ್ 2025, 6:25 IST
Last Updated 24 ನವೆಂಬರ್ 2025, 6:25 IST
<div class="paragraphs"><p>ದೇಶದ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಸೂರ್ಯ ಕಾಂತ್ ಪ್ರಮಾಣ ವಚನ ಸ್ವೀಕರಿಸಿದರು</p><p></p></div>

ದೇಶದ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಸೂರ್ಯ ಕಾಂತ್ ಪ್ರಮಾಣ ವಚನ ಸ್ವೀಕರಿಸಿದರು

   

– ಸುಪ್ರೀಂ ಕೋರ್ಟ್ ಚಿತ್ರ

ADVERTISEMENT

ನವದೆಹಲಿ: ದೇಶದ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಸೂರ್ಯ ಕಾಂತ್ ಅವರು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.

ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ ಸಿಂಗ್, ಭಾರಿ ಕೈಗಾರಿಕಾ ಸಚಿವ ಎಚ್‌.ಡಿ ಕುಮಾರಸ್ವಾಮಿ ಸೇರಿ ಕೇಂದ್ರದ ಹಲವು ಸಚಿವರು, ಸುಪ್ರೀಂ ಕೋರ್ಟ್‌ನ ಇತರೆ ನ್ಯಾಯಮೂರ್ತಿಗಳು, ಭೂತಾನ್, ಕೀನ್ಯಾ, ಮಲೇಷ್ಯಾ, ಬ್ರೆಜಿಲ್, ಮಾರಿಷಸ್, ನೇಪಾಳ ಹಾಗೂ ಶ್ರೀಲಂಕಾದ ಮುಖ್ಯ ನ್ಯಾಯಮೂರ್ತಿಗಳು ಭಾಗಿಯಾದರು.

ಸೂರ್ಯ ಕಾಂತ್ ಅವರು 2019ರ ಮೇ 24ರಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಯಾಗಿ ನೇಮಕವಾಗಿದ್ದರು. 2027ರ ಫೆಬ್ರುವರಿ 9 ಅಂದರೆ ಸುಮಾರು 14 ತಿಂಗಳು ಅವರು ದೇಶದ ಮುಖ್ಯ ನ್ಯಾಯಮೂರ್ತಿಯಾಗಿರಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.