
ಪಿಟಿಐ
ನವದೆಹಲಿ: ಪೂರ್ವ ಲಡಾಖ್‌ನ ವಾಸ್ತವಿಕ ನಿಯಂತ್ರಣ ರೇಖೆ(ಎಲ್‌ಎಸಿ) ಉದ್ದಕ್ಕೂ ಶಾಂತಿ ಮತ್ತು ಸುರಕ್ಷತೆಯನ್ನು ಕಾಪಾಡಿಕೊಳ್ಳುವ ಉದ್ದೇಶದಿಂದ ಭಾರತ ಮತ್ತು ಚೀನಾ ಸೇನೆಗಳ ನಡುವೆ ಮಾತುಕತೆ ನಡೆದಿದೆ ಎಂದು ಚೀನಾ ರಕ್ಷಣಾ ಸಚಿವಾಲಯವು ಬುಧವಾರ ತಿಳಿಸಿದೆ.
ಅ. 25 ರಂದು ಉಭಯ ದೇಶಗಳ ನಡುವೆ ಮೊಲ್ಡೊ-ಚುಶುಲ್ ಗಡಿಯಲ್ಲಿ ಕಾರ್ಪ್ಸ್ ಕಮಾಂಡರ್ ಮಟ್ಟದ ಮಾತುಕತೆ ನಡೆದಿದೆ.
ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಹಾಗೂ ಭಾರತದ ಪ್ರಧಾನಿ ಮೋದಿ ಅವರ ಸೂಚನೆಯಂತೆ, ಉಭಯ ದೇಶಗಳ ನಡುವಿನ ಗಡಿಯ ಪಶ್ಚಿಮ ವಲಯದಲ್ಲಿ ಎರಡೂ ದೇಶಗಳ ಸೇನೆಗಳು ಸಕ್ರಿಯವಾಗಿರಬೇಕು ಹಾಗೂ ಸಂವಹನ ನಡೆಸುತ್ತಿರಬೇಕು. ಈ ಮೂಲಕ ಗಡಿಯಲ್ಲಿ ಶಾಂತಿ ಸ್ಥಾಪಿಸಬೇಕು ಎಂದು ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದೆ.
ಈ ಸಭೆಯ ಕುರಿತು ಭಾರತವು ಇದುವರೆಗೂ ಯಾವುದೇ ಅಧಿಕೃತ ಮಾಹಿತಿಯನ್ನು ಬಿಡುಗಡೆಗೊಳಿಸಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.