ನವದೆಹಲಿ: ಪೂರ್ವ ಲಡಾಖ್ ಗಡಿಯಿಂದ ಉಭಯ ದೇಶಗಳು ಸೇನೆಯನ್ನು ಹಿಂತೆಗೆಯುವ ಪ್ರಕ್ರಿಯೆಯನ್ನು ಚುರುಕುಗೊಳಿಸುವ ಸಂಬಂಧ ಭಾರತ–ಚೀನಾ ನಡುವೆ ಸುದೀರ್ಘ 16 ಗಂಟೆಗಳ ಕಾಲ ಮಾತುಕತೆ ನಡೆಯಿತು.
ವಾಸ್ತವ ನಿಯಂತ್ರಣ ರೇಖೆ (ಎಲ್‌ಎಸಿ) ಬಳಿ, ಚೀನಾ ಭಾಗದಲ್ಲಿರುವ ಮಾಲ್ಡೊ ಗಡಿ ಠಾಣೆಯಲ್ಲಿ ಸೇನಾ ಕಮಾಂಡರ್‌ಗಳ ಮಟ್ಟದ 10ನೇ ಸುತ್ತಿನ ಮಾತುಕತೆ ನಡೆಯಿತು.
ಶನಿವಾರ ಬೆಳಿಗ್ಗೆ 10ಕ್ಕೆ ಆರಂಭಗೊಂಡ ಈ ಮಾತುಕತೆ, ಭಾನುವಾರ ನಸುಕಿನ 2 ಗಂಟೆಗೆ ಮುಕ್ತಾಯಗೊಂಡಿತು. ಹಾಟ್ ಸ್ಪ್ರಿಂಗ್ಸ್, ಗೋಗ್ರಾ ಹಾಗೂ ಡೆಪ್ಸಾಂಗ್‌ನಲ್ಲಿ ಸಂಘರ್ಷವನ್ನು ಶಮನಗೊಳಿಸುವ ಕುರಿತು ಚರ್ಚಿಸಲಾಯಿತು ಎಂದು ಮೂಲಗಳು ಹೇಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.