ADVERTISEMENT

ಸೇನಾ ವಾಪಸಾತಿ ಪ್ರಕ್ರಿಯೆ ಸೆಪ್ಟೆಂಬರ್‌ 12ರೊಳಗೆ ಪೂರ್ಣ: ಅರಿಂದಮ್ ಬಾಗ್ಚಿ

ಪಿಟಿಐ
Published 9 ಸೆಪ್ಟೆಂಬರ್ 2022, 11:03 IST
Last Updated 9 ಸೆಪ್ಟೆಂಬರ್ 2022, 11:03 IST
ಅರಿಂದಮ್ ಬಾಗ್ಚಿ
ಅರಿಂದಮ್ ಬಾಗ್ಚಿ   

ನವದೆಹಲಿ: ಪೂರ್ವ ಲಡಾಖ್‌ನ ಗೋಗ್ರಾ– ಹಾಟ್ ಸ್ಪ್ರಿಂಗ್ಸ್ ಗಡಿ ಪ್ರದೇಶದಿಂದ ಭಾರತ ಮತ್ತು ಚೀನಾದ ಸೇನಾ ವಾಪಸಾತಿ ಪ್ರಕ್ರಿಯೆ ಸೆಪ್ಟೆಂಬರ್‌ 12ರೊಳಗೆ ಪೂರ್ಣಗೊಳ್ಳಲಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಶುಕ್ರವಾರ ತಿಳಿಸಿದ್ದಾರೆ.

ಗಸ್ತು ಪಾಯಿಂಟ್ 15ರಿಂದ (ಪಿಪಿ 15) ಸೇನಾ ವಾಪಸಾತಿ ಪ್ರಕ್ರಿಯೆ ಆರಂಭಗೊಂಡಿದೆ ಎಂದು ಉಭಯ ದೇಶಗಳು ಘೋಷಿಸಿದ ಬಳಿಕ ಅವರು ಈ ಹೇಳಿಕೆ ನೀಡಿದ್ದಾರೆ.

ವಾಸ್ತವ ನಿಯಂತ್ರಣ ರೇಖೆಯುದ್ದಕ್ಕೂ (ಎಲ್‌ಎಸಿ) ಶಾಂತಿ ಪುನರ್‌ಸ್ಥಾಪಿಸುವ ನಿಟ್ಟಿನಲ್ಲಿ ಮಾತುಕತೆ ನಡೆಸಲು ಎರಡೂ ದೇಶಗಳು ಒಪ್ಪಿಕೊಂಡಿವೆ ಎಂದಿದ್ದಾರೆ.

ADVERTISEMENT

‘ಪಿಪಿ 15 ಪ್ರದೇಶದಲ್ಲಿ ನಿರ್ಮಿಸಿರುವ ತಾತ್ಕಾಲಿಕ ಮೂಲ ಸೌಕರ್ಯಗಳನ್ನು ತೆರವುಗೊಳಿಸಲು ಮತ್ತು ಅದನ್ನು ಪರಸ್ಪರ ಪರಿಶೀಲಿಸಲು ಒಪ್ಪಿಕೊಳ್ಳಲಾಗಿದೆ. ಉದ್ವಿಗ್ನ ಸ್ಥಿತಿ ನಿರ್ಮಾಣವಾಗುವುದಕ್ಕಿಂತ ಮೊದಲು ಈ ಪ್ರದೇಶದಲ್ಲಿದ್ದ ಭೂರೂಪಗಳನ್ನು ಮರುಸ್ಥಾಪಿಸಲಾಗುವುದು’ ಎಂದೂ ಹೇಳಿದ್ದಾರೆ.

ದೃಢೀಕರಿಸಿದ ಚೀನಾ (ಬೀಜಿಂಗ್‌ ವರದಿ): ‘ಚೀನಾ ಮತ್ತು ಭಾರತದ ಸೇನಾ ಕಮಾಂಡರ್‌ ಮಟ್ಟದಲ್ಲಿ ನಡೆದ 16ನೇ ಸುತ್ತಿನ ಸಭೆಯ ತೀರ್ಮಾನದಂತೆಪಿಪಿ 15 ಪ್ರದೇಶದಿಂದ ಸೇನಾ ವಾಪಸಾತಿ ಪ್ರಕ್ರಿಯೆ ಆರಂಭಗೊಂಡಿದೆ’ ಎಂದು ಚೀನಾದ ರಕ್ಷಣಾ ಸಚಿವಾಲಯ ಶುಕ್ರವಾರ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.