ADVERTISEMENT

ಕೋವಿಡ್–19: ಭಾರತದ ಚೇತರಿಕೆ ಪ್ರಮಾಣ ವಿಶ್ವದಲ್ಲೇ ಹೆಚ್ಚು

ಪಿಟಿಐ
Published 14 ಸೆಪ್ಟೆಂಬರ್ 2020, 10:25 IST
Last Updated 14 ಸೆಪ್ಟೆಂಬರ್ 2020, 10:25 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಕೊರೊನಾ ವೈರಸ್ ಸೋಂಕಿನಿಂದ ಚೇತರಿಕೆಯಾಗುತ್ತಿರುವವರ ಪ್ರಮಾಣ ಭಾರತದಲ್ಲೇ ಹೆಚ್ಚು ಎಂಬುದು ಜಾನ್ಸ್ ಹಾಪ್‌ಕಿನ್ಸ್ ವಿಶ್ವವಿದ್ಯಾಲಯದ ದತ್ತಾಂಶಗಳಿಂದ ತಿಳಿದುಬಂದಿದೆ. ಇದರೊಂದಿಗೆ, ಚೇತರಿಕೆ ಪ್ರಮಾಣದಲ್ಲಿಯೂ ಭಾರತವು ಬ್ರೆಜಿಲ್‌ ಅನ್ನು ಹಿಂದಿಕ್ಕಿದೆ.

ವಿಶ್ವದಾದ್ಯಂತ ಈವರೆಗೆ 1,96,25,959 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. 2,90,06,033 ಜನರಿಗೆ ಸೋಂಕು ತಗುಲಿದ್ದು, 9,24,105 ಜನ ಮೃತಪಟ್ಟಿದ್ದಾರೆ.

ಜಾನ್ಸ್ ಹಾಪ್‌ಕಿನ್ಸ್ ವಿಶ್ವವಿದ್ಯಾಲಯದ ದತ್ತಾಂಶ ಪ್ರಕಾರ, ಭಾರತದಲ್ಲಿ ಸೋಂಕಿನಿಂದ ಈವರೆಗೆ 37,80,107 ಜನ ಗುಣಮುಖರಾಗಿದ್ದಾರೆ. ಬ್ರೆಜಿಲ್‌ನಲ್ಲಿ 37,23,206 ಹಾಗೂ ಅಮೆರಿಕದಲ್ಲಿ 24,51,406 ಮಂದಿ ಚೇತರಿಸಿಕೊಂಡಿದ್ದಾರೆ.

ADVERTISEMENT

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ದೇಶದಲ್ಲಿನ ಚೇತರಿಕೆ ಪ್ರಮಾನ ಶೇ 78ಕ್ಕೆ ತಲುಪಿದೆ. ಪ್ರತಿ ದಿನ ಗುಣಮುಖರಾಗುತ್ತಿರುವವರ ಸಂಖ್ಯೆಯಲ್ಲಿಯೂ ಹೆಚ್ಚಳವಾಗಿದೆ.

‘ಕಳೆದ 24 ಗಂಟೆಗಳಲ್ಲಿ 77,512 ಸೋಂಕಿತರು ಚೇತರಿಸಿಕೊಂಡಿದ್ದಾರೆ. ಒಟ್ಟು 37,80,107 ಮಂದಿ ಗುಣಮುಖರಾಗಿದ್ದಾರೆ. ಗುಣಮುಖರಾಗುತ್ತಿರುವವರ ಮತ್ತು ಸಕ್ರಿಯ ಪ್ರಕರಣಗಳ ನಡುವಣ ಅಂತರವೂ ಹೆಚ್ಚಾಗುತ್ತಿದೆ’ ಎಂದು ಸಚಿವಾಲಯ ತಿಳಿಸಿದೆ.

ದೇಶದಾದ್ಯಂತ ಗುಣಮುಖರಾದವರ ಪೈಕಿ ಶೇ 60ರಷ್ಟು ಮಂದಿ ಮಹಾರಾಷ್ಟ್ರ, ಕರ್ನಾಟಕ, ಆಂಧ್ರ ಪ್ರದೇಶ, ಉತ್ತರ ಪ್ರದೇಶ ಮತ್ತು ತಮಿಳುನಾಡಿನವರು ಎಂದೂ ಸಚಿವಾಲಯ ತಿಳಿಸಿದೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.