ADVERTISEMENT

Covid-19 India Update: ಕಳೆದ 24 ಗಂಟೆಗಳಲ್ಲಿ 8,392 ಹೊಸ ಪ್ರಕರಣ, 230 ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 1 ಜೂನ್ 2020, 5:57 IST
Last Updated 1 ಜೂನ್ 2020, 5:57 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 8,392 ಹೊಸ ಕೋವಿಡ್‌–19 ಪ್ರಕರಣಗಳು ದೃಢಪಟ್ಟಿದ್ದು, 230 ಜನ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ದೇಶದಲ್ಲಿ ಈವರೆಗೆ ಒಟ್ಟು 1,90,535 ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿದ್ದು, 5,394 ಜನರು ಸಾವಿಗೀಡಾಗಿದ್ದಾರೆ.
ಸದ್ಯ 93,322 ಪ್ರಕರಣಗಳು ಸಕ್ರಿಯವಾಗಿದ್ದು, 91,819 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಮಹಾರಾಷ್ಟ್ರದಲ್ಲಿ ಈವರೆಗೆ ಒಟ್ಟು 67,655 ಪ್ರಕರಣಗಳು ಬೆಳಕಿಗೆ ಬಂದಿದ್ದು, 2,286 ಜನರು ಮೃತರಾಗಿದ್ದಾರೆ. 36,040 ಸೋಂಕಿತರಿಗೆ ಚಿಕಿತ್ಸೆ ಮುಂದುವರಿದಿದ್ದು, 29,329 ಮಂದಿ ಗುಣಮುಖರಾಗಿದ್ದಾರೆ.

ADVERTISEMENT

ಗುಜರಾತ್‌ನಲ್ಲಿ 16,779 ಕೋವಿಡ್-19 ಪ್ರಕರಣಗಳು ಪತ್ತೆಯಾಗಿವೆ. ಸದ್ಯ 5,822 ಸಕ್ರಿಯ ಪ್ರಕರಣಗಳಿದ್ದು, 9,919 ಗುಣಮುಖರಾಗಿದ್ದಾರೆ. ದೆಹಲಿಯಲ್ಲಿ 10,893 ಸಕ್ರಿಯ ಪ್ರಕರಣಗಳಿದ್ದು, ಒಟ್ಟಾರೆ 19,844 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ತಮಿಳುನಾಡಿನಲ್ಲಿ 22,333 ಮಂದಿಗೆ ಸೋಂಕು ತಗುಲಿದ್ದು, 9,403 ಸಕ್ರಿಯ ಪ್ರಕರಣಗಳಿವೆ. ಇದುವರೆಗೂ 173 ಮಂದಿ ಮೃತಪಟ್ಟಿದ್ದು, 12,757 ಗುಣಮುಖರಾಗಿದ್ದಾರೆ.

ಇನ್ನುಳಿದಂತೆ ಮಧ್ಯಪ್ರದೇಶದಲ್ಲಿ 350, ಪಶ್ಚಿಮ ಬಂಗಾಳದಲ್ಲಿ 317, ಉತ್ತರ ಪ್ರದೇಶದಲ್ಲಿ 213 ಜನರು ಕೊರೊನಾ ಸೋಂಕಿನಿಂದ ಸಾವಿಗೀಡಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.