ADVERTISEMENT

Covid-19 India Update | ಒಂದೇ ದಿನದಲ್ಲಿ 8,909 ಕೊರೊನಾ ಪ್ರಕರಣ, 217 ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 3 ಜೂನ್ 2020, 5:00 IST
Last Updated 3 ಜೂನ್ 2020, 5:00 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 8,909 ಹೊಸ ಕೋವಿಡ್‌–19 ಪ್ರಕರಣಗಳು ದೃಢಪಟ್ಟಿದ್ದು, 217 ಜನ ಮೃತಪಟ್ಟಿದ್ದಾರೆ. ಈ ಮೂಲಕ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 2 ಲಕ್ಷದ ಗಡಿ ದಾಟಿದೆ.

ದೇಶದಲ್ಲಿ ಈವರೆಗೆ ಒಟ್ಟು 207,615 ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿದ್ದು, 5,815 ಜನರು ಸಾವಿಗೀಡಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಸದ್ಯ 101,497 ಪ್ರಕರಣಗಳು ಸಕ್ರಿಯವಾಗಿದ್ದು, 100,303 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ADVERTISEMENT

ಮಹಾರಾಷ್ಟ್ರದಲ್ಲಿ ಈವರೆಗೆ ಒಟ್ಟು 72,300 ಪ್ರಕರಣಗಳು ಬೆಳಕಿಗೆ ಬಂದಿದ್ದು, 2,465 ಜನರು ಮೃತರಾಗಿದ್ದಾರೆ. 38,502 ಸೋಂಕಿತರಿಗೆ ಚಿಕಿತ್ಸೆ ಮುಂದುವರಿದಿದ್ದು, 31,333 ಮಂದಿ ಗುಣಮುಖರಾಗಿದ್ದಾರೆ.

ದೆಹಲಿಯಲ್ಲಿ 12,333 ಸಕ್ರಿಯ ಪ್ರಕರಣಗಳಿದ್ದು, ಒಟ್ಟಾರೆ 22,132 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದುವರೆಗೂ 556 ಮಂದಿ ಮೃತಪಟ್ಟಿದ್ದು, 9,243 ಮಂದಿ ಗುಣಮುಖರಾಗಿದ್ದಾರೆ. ತಮಿಳುನಾಡಿನಲ್ಲಿ 24,586 ಮಂದಿಗೆ ಸೋಂಕು ತಗುಲಿದ್ದು, 10,683 ಸಕ್ರಿಯ ಪ್ರಕರಣಗಳಿವೆ. ಇದುವರೆಗೂ 197 ಮಂದಿ ಮೃತಪಟ್ಟಿದ್ದು, 13,706 ಗುಣಮುಖರಾಗಿದ್ದಾರೆ.

ಗುಜರಾತ್‌ನಲ್ಲಿ 17,200 ಕೋವಿಡ್-19 ಪ್ರಕರಣಗಳು ಪತ್ತೆಯಾಗಿವೆ. ಸದ್ಯ 5,357 ಸಕ್ರಿಯ ಪ್ರಕರಣಗಳಿದ್ದು, 10,780 ಗುಣಮುಖರಾಗಿದ್ದಾರೆ. 1,063 ಮಂದಿ ಕೋವಿಡ್-19ನಿಂದ ಮೃತಪಟ್ಟಿದ್ದಾರೆ.

ಇನ್ನುಳಿದಂತೆ ಮಧ್ಯಪ್ರದೇಶದಲ್ಲಿ 364, ಪಶ್ಚಿಮ ಬಂಗಾಳದಲ್ಲಿ 335, ಉತ್ತರ ಪ್ರದೇಶದಲ್ಲಿ 222 ಜನರು ಕೊರೊನಾ ಸೋಂಕಿನಿಂದ ಸಾವಿಗೀಡಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.