ADVERTISEMENT

Covid-19 India Update: ಕಳೆದ 24 ಗಂಟೆಗಳಲ್ಲಿ 9,887 ಹೊಸ ಪ್ರಕರಣ, 294 ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 6 ಜೂನ್ 2020, 4:13 IST
Last Updated 6 ಜೂನ್ 2020, 4:13 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 9,887 ಹೊಸ ಕೋವಿಡ್‌–19 ಪ್ರಕರಣಗಳು ದೃಢಪಟ್ಟಿದ್ದು, 294 ಜನ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ದೇಶದಲ್ಲಿ ಈವರೆಗೆ ಒಟ್ಟು 2,36,657 ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿದ್ದು, 6,642 ಜನರು ಸಾವಿಗೀಡಾಗಿದ್ದಾರೆ.
ಸದ್ಯ 1,15,942 ಪ್ರಕರಣಗಳು ಸಕ್ರಿಯವಾಗಿದ್ದು, 1,14,073 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಕರ್ನಾಟಕದಲ್ಲಿ ಇದುವರೆಗೂ ಒಟ್ಟು 4,835 ಕೊರೊನಾ ವೈರಸ್ ಸೋಂಕು ಪ್ರಕರಣಗಳು ವರದಿಯಾಗಿದ್ದು, 57 ಜನರು ಮೃತಪಟ್ಟಿದ್ದಾರೆ. 3,090 ಸಕ್ರಿಯ ಪ್ರಕರಣಗಳಿದ್ದು, 1,688 ಜನರು ಗುಣಮುಖರಾಗಿದ್ದಾರೆ.

ADVERTISEMENT

ಮಹಾರಾಷ್ಟ್ರದಲ್ಲಿ ಈವರೆಗೆ ಒಟ್ಟು 80,229 ಪ್ರಕರಣಗಳು ಬೆಳಕಿಗೆ ಬಂದಿದ್ದು, 2,849 ಜನರು ಮೃತರಾಗಿದ್ದಾರೆ. 42,224 ಸೋಂಕಿತರಿಗೆ ಚಿಕಿತ್ಸೆ ಮುಂದುವರಿದಿದ್ದು, 35,156 ಮಂದಿ ಗುಣಮುಖರಾಗಿದ್ದಾರೆ.

ತಮಿಳುನಾಡಿನಲ್ಲಿ 28,694 ಮಂದಿಗೆ ಸೋಂಕು ತಗುಲಿದ್ದು, 12,700 ಸಕ್ರಿಯ ಪ್ರಕರಣಗಳಿವೆ. ಇದುವರೆಗೂ 232 ಮಂದಿ ಮೃತಪಟ್ಟಿದ್ದು, 15,762 ಗುಣಮುಖರಾಗಿದ್ದಾರೆ.

ಗುಜರಾತ್‌ನಲ್ಲಿ 19,094 ಕೋವಿಡ್-19 ಪ್ರಕರಣಗಳು ಪತ್ತೆಯಾಗಿವೆ. ಸದ್ಯ 4,901 ಸಕ್ರಿಯ ಪ್ರಕರಣಗಳಿದ್ದು, 13,003 ಗುಣಮುಖರಾಗಿದ್ದಾರೆ. 1,190 ಜನರು ಮೃತಪಟ್ಟಿದ್ದಾರೆ. ದೆಹಲಿಯಲ್ಲಿ 15,311 ಸಕ್ರಿಯ ಪ್ರಕರಣಗಳಿದ್ದು, ಒಟ್ಟಾರೆ 26,334 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಪೈಕಿ 708 ಜನರು ಮೃತಪಟ್ಟಿದ್ದರೆ, 10,315 ಮಂದಿ ಗುಣಮುಖರಾಗಿದ್ದಾರೆ.

ಇನ್ನುಳಿದಂತೆ ಮಧ್ಯಪ್ರದೇಶದಲ್ಲಿ 384, ಪಶ್ಚಿಮ ಬಂಗಾಳದಲ್ಲಿ 366, ಉತ್ತರ ಪ್ರದೇಶದಲ್ಲಿ 257 ಜನರು ಕೊರೊನಾ ಸೋಂಕಿನಿಂದ ಸಾವಿಗೀಡಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.