ADVERTISEMENT

Covid-19 India Update | ದೇಶದಾದ್ಯಂತ 60,975 ಹೊಸ ಪ್ರಕರಣ

ಏಜೆನ್ಸೀಸ್
Published 7 ಆಗಸ್ಟ್ 2020, 17:25 IST
Last Updated 7 ಆಗಸ್ಟ್ 2020, 17:25 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದೇಶದಾದ್ಯಂತ ಇಂದು ಒಟ್ಟು60,975 ಹೊಸ ಕೊರೊನಾ ವೈರಸ್ ಸೋಂಕು ಪ್ರಕರಣಗಳು ದೃಢಪಟ್ಟಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 20.80 ಲಕ್ಷಕ್ಕೆಏರಿಕೆಯಾಗಿದೆ.ಒಟ್ಟು ಸೋಂಕಿತರಪೈಕಿ14.19 ಲಕ್ಷಮಂದಿ ಗುಣಮುಖರಾಗಿದ್ದಾರೆ. ಇಂದು ಒಂದೇ ದಿನ 48,727 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.

ಇಂದು 937 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ42,510ಕ್ಕೆ ತಲುಪಿದೆ. ಉಳಿದಂತೆ6.19 ಲಕ್ಷ ಸಕ್ರಿಯ ಪ್ರಕರಣಗಳಿವೆ ಎಂದು ಇಲಾಖೆ ಮಾಹಿತಿ ನೀಡಿದೆ.

ADVERTISEMENT

ಮಹಾರಾಷ್ಟ್ರದಲ್ಲಿ ಇದುವರೆಗೆ4.90 ಲಕ್ಷ ಪ್ರಕರಣಗಳು ದೃಢಪಟ್ಟಿದ್ದು,17,092 ಮಂದಿ ಮೃತಪಟ್ಟಿದ್ದಾರೆ. ತಮಿಳುನಾಡಿನಲ್ಲಿ 2.85 ಲಕ್ಷಜನರಿಗೆ ಸೋಂಕು ತಗುಲಿದ್ದು, 4,690 ಸೋಂಕಿತರು ಸಾವಿಗೀಡಾಗಿದ್ದಾರೆ.

ರಾಷ್ಟ್ರರಾಜಧಾನಿದೆಹಲಿಯಲ್ಲಿ 2.06 ಲಕ್ಷ ಸೋಂಕು ಪ್ರಕರಣಗಳು ವರದಿಯಾಗಿವೆ. ಈ ಪೈಕಿ 4,082 ಮಂದಿ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.