ADVERTISEMENT

Covid-19 India Udpate: 2 ಲಕ್ಷದ ಸಮೀಪ ತಲುಪಿದ ಹೊಸ ಪ್ರಕರಣಗಳ ಸಂಖ್ಯೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 12 ಜನವರಿ 2022, 4:34 IST
Last Updated 12 ಜನವರಿ 2022, 4:34 IST
ಕೋವಿಡ್‌–19 ಪರೀಕ್ಷೆಗಾಗಿ ಮುಂಬೈ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಂದ ಮಾದರಿ ಸಂಗ್ರಹಿಸುತ್ತಿರುವುದು
ಕೋವಿಡ್‌–19 ಪರೀಕ್ಷೆಗಾಗಿ ಮುಂಬೈ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಂದ ಮಾದರಿ ಸಂಗ್ರಹಿಸುತ್ತಿರುವುದು   

ನವದೆಹಲಿ: ದೇಶದಾದ್ಯಂತ ಮತ್ತೆ ಕೋವಿಡ್‌–19 ದೃಢಪಟ್ಟ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದ್ದು, ಎರಡು ಲಕ್ಷದ ಸಮೀಪಕ್ಕೆ ತಲುಪಿದೆ. ಬುಧವಾರ 24 ಗಂಟೆಗಳ ಅಂತರದಲ್ಲಿ 1,94,720 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ಪತ್ತೆಯಾಗಿದೆ. ಇದೇ ಅವಧಿಯಲ್ಲಿ 442 ಮಂದಿ ಮೃತಪಟ್ಟಿದ್ದಾರೆ ಹಾಗೂ 60,405 ಮಂದಿ ಗುಣಮುಖರಾಗಿದ್ದಾರೆ.

ಕೋವಿಡ್‌–19 ದೃಢ ಪ್ರಮಾಣ ಶೇಕಡ 11.05ರಷ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 9,55,319ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಒಟ್ಟು 4,868 ಓಮೈಕ್ರಾನ್‌ ಪ್ರಕರಣಗಳು ಇರುವುದಾಗಿ ಕೇಂದ್ರ ಆರೋಗ್ಯ ಇಲಾಖೆಯ ಅಪ್‌ಡೇಟ್‌ನಿಂದ ತಿಳಿದು ಬಂದಿದೆ.

ನಿನ್ನೆಗೆ ಹೋಲಿಸಿದರೆ, ಇಂದು 26,657 (ಶೇ 15.8) ಪ್ರಕರಣಗಳು ಏರಿಕೆಯಾಗಿವೆ.

ADVERTISEMENT

ಒಟ್ಟು ಕೋವಿಡ್‌ ಪ್ರಕರಣಗಳ ಸಂಖ್ಯೆ 3.60 ಕೋಟಿ ದಾಟಿದ್ದು, ಈ ಪೈಕಿ ಸೋಂಕಿನಿಂದ 4,84,655 ಮಂದಿ ಸಾವಿಗೀಡಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.