ADVERTISEMENT

India Covid Update: ದೇಶದಲ್ಲಿ 187 ಹೊಸ ಕೋವಿಡ್‌ ಪ್ರಕರಣಗಳು

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2022, 7:51 IST
Last Updated 22 ಡಿಸೆಂಬರ್ 2022, 7:51 IST

ನವದೆಹಲಿ:ದೇಶದಲ್ಲಿ ಕೋವಿಡ್–19 ದೃಢಪಟ್ಟ 187 ಹೊಸ ಪ್ರಕರಣಗಳು ಕಳೆದ 24 ಗಂಟೆಗಳಲ್ಲಿ ವರದಿಯಾಗಿವೆ.

ಸಚಿವಾಲಯ ಬುಧವಾರ ಬೆಳಗ್ಗೆ 8ಕ್ಕೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡುಬಂದಿದೆ. ಸದ್ಯ3,402 ಪ್ರಕರಣಗಳು ದೇಶದಲ್ಲಿ ಸಕ್ರಿಯವಾಗಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ದೇಶದಲ್ಲಿ ಇದುವರೆಗೆ ಪತ್ತೆಯಾಗಿರುವ ಪ್ರಕರಣಗಳ ಸಂಖ್ಯೆ 4,46,76,386 ಕ್ಕೆ ತಲುಪಿದೆ. ಬುಧವಾರ ಮೃತಪಟ್ಟಿರುವ ಮೂವರೂ ಸೇರಿ ಸಾವಿನ ಸಂಖ್ಯೆ, 5,30,681ಕ್ಕೆ ಏರಿಕೆಯಾಗಿದೆ.

ADVERTISEMENT

ಒಟ್ಟಾರೆ ಪ್ರಕರಣಗಳಿಗೆ ಹೋಲಿಸಿದರೆ, ಸಕ್ರಿಯ ಪ್ರಕರಣಗಳ ಪ್ರಮಾಣ ಶೇ 0.01 ರಷ್ಟಿದೆ. ಗುಣಮುಖರಾದವರ ಪ್ರಮಾಣ ಶೇ 98.80 ರಷ್ಟು ಇದೆ ಎಂದು ಸಚಿವಾಲಯ ಹೇಳಿದೆ.

ಚೀನಾದಲ್ಲಿ ಕೋವಿಡ್‌ ಪ್ರಕರಣಗಳ ಹೆಚ್ಚಳವಾಗುತ್ತಿರುವುದರಿಂದ ಜನರು ಆತಂಕಪಡುವ ಅಗತ್ಯ ಇಲ್ಲ ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.