ADVERTISEMENT

India Covid Update: ಹೊಸದಾಗಿ 547 ಕೋವಿಡ್ ಪ್ರಕರಣಗಳು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 14 ನವೆಂಬರ್ 2022, 7:46 IST
Last Updated 14 ನವೆಂಬರ್ 2022, 7:46 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ದೇಶದಾದ್ಯಂತ ಸೋಮವಾರ ಬೆಳಿಗ್ಗೆ ಕೊನೆಗೊಂಡ 24 ಗಂಟೆಗಳಲ್ಲಿ ಹೊಸದಾಗಿ 547 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ದೇಶದಲ್ಲಿ ಇದುವರೆಗೆ 4,46,66,924 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಒಟ್ಟು 5,30,532 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

ಒಟ್ಟು ಸೋಂಕಿತರ ಪೈಕಿ ಶೇ 0.02 ಸಕ್ರಿಯ ಪ್ರಕರಣಗಳಿವೆ. ಹಾಗೆಯೇ ರಾಷ್ಟ್ರೀಯ ಕೋವಿಡ್ ಚೇತರಿಕೆ ಪ್ರಮಾಣ ಶೇ 99 ಆಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.