ADVERTISEMENT

India Covid Updates: 16,135 ಹೊಸ ಪ್ರಕರಣ, 24 ಸೋಂಕಿತರ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ಜುಲೈ 2022, 4:45 IST
Last Updated 4 ಜುಲೈ 2022, 4:45 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 16,135 ಹೊಸ ಕೋವಿಡ್‌ ಪ್ರಕರಣಗಳು ದಾಖಲಾಗಿದ್ದು, 24 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಈವರೆಗೆ ದೇಶದಲ್ಲಿ ದಾಖಲಾದ ಕೋವಿಡ್‌ ಪ್ರಕರಣಗಳ ಒಟ್ಟು ಸಂಖ್ಯೆ 4,35,18,564 ರಷ್ಟಾಗಿದ್ದು, ಮೃತಪಟ್ಟ ಸೋಂಕಿತರ ಸಂಖ್ಯೆ 5,25,223ಕ್ಕೆ ಏರಿದೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 1,13,864ಕ್ಕೆ ಏರಿದ್ದು, ಪ್ರತಿದಿನದ ಪಾಸಿಟಿವಿಟಿ ದರವು ಶೇ 4.85 ರಷ್ಟಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.