ADVERTISEMENT

Covid-19 India Updates: ಒಂದೇ ದಿನ 28,903 ಪ್ರಕರಣ, 188 ಸಾವು

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2021, 5:29 IST
Last Updated 17 ಮಾರ್ಚ್ 2021, 5:29 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 28,903 ಹೊಸ ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿವೆ. 188 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಬುಧವಾರ ಮಾಹಿತಿ ನೀಡಿದೆ.

ದೇಶದಲ್ಲಿ ಈವರೆಗೆ ಒಟ್ಟು 1,14,38,734 ಪ್ರಕರಣಗಳು ಬೆಳಕಿಗೆ ಬಂದಿದ್ದು, 1,59,044 ಮಂದಿ ಸಾವಿಗೀಡಾಗಿದ್ದಾರೆ.

ಈವರೆಗೂ 1,10,45,284 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, 2,34,406 ಸಕ್ರಿಯ ಪ್ರಕರಣಗಳಿವೆ. ಈವರೆಗೆ 3. 50 (3,50,64,536) ಕೋಟಿಗೂ ಅಧಿಕ ಜನರಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ADVERTISEMENT

ಕೋವಿಡ್‌ ಎರಡನೇ ಅಲೆ ಆರಂಭವಾಗಬಹುದು ಎಂಬ ಆತಂಕವು ದಟ್ಟವಾಗುತ್ತಿರುವ ಹಿಂದೆಯೇ ಕೇಂದ್ರ ಆರೋಗ್ಯ ಸಚಿವಾಲಯ, ಕಟ್ಟು ನಿಟ್ಟಿನ ಕ್ರಮಕ್ಕೆ ಸಲಹೆ ಮಾಡಿದೆ. ರಾತ್ರಿ ಕರ್ಫ್ಯೂ ಮತ್ತು ‌ವಾರಾಂತ್ಯದ ಲಾಕ್‌ಡೌನ್‌ ಪರಿಣಾಮಗಳು ಸೀಮಿತವಾಗಿದೆ ಎಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.