ADVERTISEMENT

India Covid Updates: ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ

​ಪ್ರಜಾವಾಣಿ ವಾರ್ತೆ
Published 29 ಜುಲೈ 2022, 5:14 IST
Last Updated 29 ಜುಲೈ 2022, 5:14 IST
ಪಿಟಿಐ ಚಿತ್ರ
ಪಿಟಿಐ ಚಿತ್ರ   

ನವದೆಹಲಿ: 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ಹೊಸದಾಗಿ 20,409 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಸೋಂಕಿತರ ಒಟ್ಟು ಸಂಖ್ಯೆ 4,39,79,730ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಇದೇ ಅವಧಿಯಲ್ಲಿ 32 ಮಂದಿ ಸೋಂಕಿತರು ಅಸುನೀಗಿದ್ದು, ಕೋವಿಡ್‌ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,26,258ಕ್ಕೆ ಏರಿದೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 1,43,988 ರಷ್ಟಾಗಿದೆ.

ADVERTISEMENT

ಸೋಂಕಿತರ ಪೈಕಿ ಶೇಕಡ 0.33 ರಷ್ಟು ಸಕ್ರಿಯ ಪ್ರಕರಣಗಳಿವೆ. ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇಕಡ 98.48 ರಷ್ಟಿದೆ.

24 ಗಂಟೆಗಳಲ್ಲಿ ಸಕ್ರಿಯ ಪ್ರಕರಣಗಳ ಪೈಕಿ 2,335 ರಷ್ಟು ಕಡಿಮೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.