ADVERTISEMENT

India Covid Updates: 17,073 ಹೊಸ ಪ್ರಕರಣ ದಾಖಲು

ಪಿಟಿಐ
Published 27 ಜೂನ್ 2022, 5:02 IST
Last Updated 27 ಜೂನ್ 2022, 5:02 IST
   

ನವದೆಹಲಿ: 24 ಗಂಟೆಗಳಲ್ಲಿ ದೇಶದಲ್ಲಿ ಕೋವಿಡ್ ದೃಢಪಟ್ಟ 17,073 ಪ್ರಕರಣಗಳು ದಾಖಲಾಗಿದ್ದು, ಸೋಂಕಿತರ ಒಟ್ಟು ಸಂಖ್ಯೆ 4,34,07,046ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಇದೇ ಅವಧಿಯಲ್ಲಿ 21 ಮಂದಿ ಸೋಂಕಿತರು ಅಸುನೀಗಿದ್ದು, ಕೋವಿಡ್‌ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,25,020ಕ್ಕೆ ಜಿಗಿದಿದೆ.

ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 94,420ರಷ್ಟಿದ್ದು, ಒಟ್ಟು ಪ್ರಕರಣಗಳ ಪೈಕಿ ಶೇಕಡ 0.22 ರಷ್ಟು ಸಕ್ರಿಯ ಪ್ರಕರಣಗಳಿವೆ.

ADVERTISEMENT

ಕಳೆದ 4 ತಿಂಗಳಲ್ಲಿ ಇದೇ ಮೊದಲ ಬಾರಿಗೆ ದೈನಂದಿನ ಕೋವಿಡ್ ಪಾಸಿಟಿವಿಟಿ ದರ ಶೇ. 5.62ಕ್ಕೆ ಜಿಗಿದಿದೆ. ವಾರದ ಪಾಸಿಟಿವಿಟಿ ದರ ಶೇಕಡ 3.39ರಷ್ಟಿದೆ.

ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇಕಡ 98.57ರಷ್ಟಿದೆ.

ದೇಶದಲ್ಲಿ ಈವರೆಗೆ 197.11 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಣೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.