ADVERTISEMENT

India Covid Updates: 1,07,189ಕ್ಕೇರಿದ ಸಕ್ರಿಯ ಪ್ರಕರಣಗಳ ಸಂಖ್ಯೆ

ಪಿಟಿಐ
Published 1 ಜುಲೈ 2022, 5:38 IST
Last Updated 1 ಜುಲೈ 2022, 5:38 IST
   

ನವದೆಹಲಿ: ದೇಶದಲ್ಲಿ ಕೋವಿಡ್‌–19 ಸಕ್ರಿಯ ಪ್ರಕರಣಗಳ ಸಂಖ್ಯೆ 1.07 ಲಕ್ಷಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಗುರುವಾರ ಬೆಳಗ್ಗೆ 8ಕ್ಕೆ ಬಿಡುಗಡೆಯಾಗಿರುವ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 17,070 ಹೊಸ ಪ್ರಕರಣಗಳು ವರದಿಯಾಗಿದ್ದು, 23 ಮಂದಿ ಮೃತಪಟ್ಟಿದ್ದಾರೆ.

ಇದರೊಂದಿಗೆ ದೇಶದಲ್ಲಿ ಈವರೆಗೆ ವರದಿಯಾದ ಒಟ್ಟು ಪ್ರಕರಣಗಳ ಸಂಖ್ಯೆ 4 ಕೋಟಿ 34 ಲಕ್ಷಕ್ಕೆ ತಲುಪಿದೆ. ಈ ಪೈಕಿ 4 ಕೋಟಿ 28 ಲಕ್ಷ ಸೋಂಕಿತರು ಗುಣಮುಖರಾಗಿದ್ದಾರೆ. ಕೋವಿಡ್‌ನಿಂದಾಗಿ ಇದುವರೆಗೆ 5,25,139 ಮಂದಿ ಮೃತಪಟ್ಟಿದ್ದಾರೆ.

ADVERTISEMENT

ಕಳೆದ 24 ಗಂಟೆಗಳಲ್ಲಿ 14,413 ಸೋಂಕಿತರು ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದರೂ, ಸಕ್ರಿಯ ಪ್ರಕರಣಗಳ ಸಂಖ್ಯೆ 1,07,189ಕ್ಕೆ ತಲುಪಿದೆ. ಅಷ್ಟಲ್ಲದೆ, ದೈನಂದಿನ ಸೋಂಕು ದೃಢ ಪ್ರಮಾಣ ಶೇ 3.40 ರಷ್ಟು ಮತ್ತು ವಾರದ ಸೋಂಕು ಖಚಿತ ಪ್ರಮಾಣ ಶೇ 3.59 ರಷ್ಟಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.