ADVERTISEMENT

India Covid Updates: 20,044 ಹೊಸ ಪ್ರಕರಣ, 59 ಸೋಂಕಿತರ ಸಾವು

ಪಿಟಿಐ
Published 16 ಜುಲೈ 2022, 4:48 IST
Last Updated 16 ಜುಲೈ 2022, 4:48 IST
ಕೋವಿಡ್ ಪರೀಕ್ಷೆಗೆ ಮಾದರಿ ಸಂಗ್ರಹ
ಕೋವಿಡ್ ಪರೀಕ್ಷೆಗೆ ಮಾದರಿ ಸಂಗ್ರಹ   

ನವದೆಹಲಿ: 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ಕೋವಿಡ್ ದೃಢಪಟ್ಟ 20,044 ಪ್ರಕರಣಗಳು ದಾಖಲಾಗಿದ್ದು, 56 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ 4,37,30,071ಕ್ಕೆ ಏರಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,40,760 ರಷ್ಟಾಗಿದೆ.

ಕೋವಿಡ್‌ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,25,660ಕ್ಕೆ ಏರಿದೆ.

ADVERTISEMENT

ಒಟ್ಟು ಸೋಂಕಿತ ಪ್ರಕರಣಗಳ ಪೈಕಿ ಶೇಕಡ 0.32 ರಷ್ಟು ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇಕಡ 98.48 ರಷ್ಟಾಗಿದೆ.

ದೈನಂದಿನ ಕೋವಿಡ್ ದೃಢ ಪ್ರಮಾಣ ಶೇಕಡ 4.80 ರಷ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.