ನವದೆಹಲಿ:ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 2,58,089 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.
ಇದೇ ಅವಧಿಯಲ್ಲಿ 385 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಪೈಕಿ ಕೇರಳ, ಮಹಾರಾಷ್ಟ್ರ, ದೆಹಲಿಯಲ್ಲಿ ವೃತರ ಸಂಖ್ಯೆ ಹೆಚ್ಚು ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 16,56,341ಕ್ಕೆ ತಲುಪಿದ್ದು, ಕೋವಿಡ್ ದೃಢ ಪ್ರಮಾಣ 119.65% ರಷ್ಟಿದೆ. 8,209 ಓಮೈಕ್ರಾನ್ ಪ್ರಕರಣಗಳು ವರದಿಯಾಗಿವೆ.
ಇದು ಹಿಂದಿನ ದಿನಕ್ಕೆ ಹೋಲಿಸಿದರೆ ಕೋವಿಡ್ ದೃಢ ಪ್ರಮಾಣದಲ್ಲಿ13,113 ಇಳಿಕೆಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.