ADVERTISEMENT

India Covid Updates: ದೇಶದಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇ 9.28ಕ್ಕೆ ಜಿಗಿತ!

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 8 ಜನವರಿ 2022, 4:39 IST
Last Updated 8 ಜನವರಿ 2022, 4:39 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ:ಕಳೆದ 24 ಗಂಟೆಗಳಲ್ಲಿ ದೇಶಲ್ಲಿ 1,41,986 ಕೊರೊನಾ ವೈರಸ್‌ ಸೋಂಕಿತರು ಪತ್ತೆಯಾಗಿದ್ದಾರೆ. ಈ ಅವಧಿಯಲ್ಲಿ 40,895 ಸೋಂಕಿತರುಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, 285 ಮಂದಿ ಕೋವಿಡ್‌ನಿಂದಾಗಿ ಕೊನೆಯುಸಿರೆಳೆದಿದ್ದಾರೆ.

ಕಳೆದ ಒಂದು ವಾರದಿಂದ ಕೋವಿಡ್‌ ಪ್ರಕರಣಗಳಲ್ಲಿ ನಿರಂತರ ಏರಿಕೆಯಾಗುತ್ತಿದ್ದು, ದೇಶದ ಪಾಸಿಟಿವಿಟಿ ದರ ಶೇ 9.28ಕ್ಕೆ ಏರಿದೆ.

ಭಾರತದಲ್ಲೀಗ ಸಕ್ರಿಯ ಪ್ರಕರಣಗಳ ಸಂಖ್ಯೆಯು ಏರುತ್ತಿದೆ. 4,72,169 ಜನ ಸೋಂಕಿತರು ಈಗ ದೇಶದಲ್ಲಿದ್ದಾರೆ.

ADVERTISEMENT

ಒಟ್ಟಾರೆ ಕೋವಿಡ್‌ ಸೋಂಕಿಗೆ ಒಳಗಾದವರ ಪೈಕಿ 3,44,12,740 ಮಂದಿ ಚೇತರಿಸಿಕೊಂಡಿದ್ದಾರೆ. 4,83,463 ಜನ ಮೃತಪಟ್ಟಿದ್ದಾರೆ.

ಭಾರತದಲ್ಲಿ ಒಟ್ಟು 150.06 ಡೋಸ್‌ ಲಸಿಕೆಗಳನ್ನು ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.