
ನವದೆಹಲಿ: ಬಲೂಚಿಸ್ತಾನದಲ್ಲಿ ಶಾಂತಿ ಕದಡಲು ಭಾರತವು ಯತ್ನಿಸುತ್ತಿದೆ ಎಂಬ ಪಾಕಿಸ್ತಾನದ ಆರೋಪವನ್ನು ಭಾರತವು ಸ್ಪಷ್ಟವಾಗಿ ನಿರಾಕರಿಸಿದೆ.
‘ತನ್ನ ಆಂತರಿಕ ವೈಫಲ್ಯವನ್ನು ಬೇರೆಡೆಗೆ ತಿರುಗಿಸಲು ಪಾಕಿಸ್ತಾನವು ಮೊದಲಿನಿಂದಲೂ ಇಂತಹ ತಂತ್ರಗಳನ್ನು ಅನುಸರಿಸುತ್ತಿದೆ’ ಎಂದು ತಿರುಗೇಟು ನೀಡಿದೆ.
‘ಪಾಕಿಸ್ತಾನದ ಆರೋಪವು ನಿರಾಧಾರವಾಗಿದೆ. ಪಾಕಿಸ್ತಾನವು ದಮನ, ಕ್ರೌರ್ಯ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆಯ ದಾಖಲೆಗಳನ್ನೇ ಹೊಂದಿದೆ’ ಎಂದು ವಿದೇಶಾಂಗ ಇಲಾಖೆಯ ವಕ್ತಾರ ರಣ್‌ಧೀರ್ ಜೈಸ್ವಾಲ್ ತಿಳಿಸಿದ್ದಾರೆ.
‘ಪಾಕಿಸ್ತಾನದ ಆಧಾರರಹಿತ ಆರೋಪಗಳನ್ನು ಸ್ಪಷ್ಟವಾಗಿ ತಿರಸ್ಕರಿಸುತ್ತಿದ್ದೇವೆ. ತನ್ನ ಆಂತರಿಕ ವೈಫಲ್ಯಗಳನ್ನು ಮರೆಮಾಚಲು ಭಾರತವನ್ನು ದೂರುವುದು ಮೊದಲಿನಿಂದಲೂ ಅನುಸರಿಸಿಕೊಂಡು ಬಂದ ತಂತ್ರವಾಗಿದೆ’ ಎಂದು ಹೇಳಿದ್ದಾರೆ.
ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಸೇನೆ ಹಾಗೂ ಉಗ್ರರ ನಡುವಿನ ಸಂಘರ್ಷದಲ್ಲಿ 15 ಮಂದಿ ಪಾಕಿಸ್ತಾನ ಯೋಧರು ಮೃತಪಟ್ಟಿದ್ದು, 92 ಮಂದಿ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.