ADVERTISEMENT

ಇನ್ನೂ 7 ಕೋವಿಡ್–19 ಲಸಿಕೆ ಅಭಿವೃದ್ಧಿಪಡಿಸುತ್ತಿದೆ ಭಾರತ: ಹರ್ಷವರ್ಧನ್

ಪಿಟಿಐ
Published 6 ಫೆಬ್ರುವರಿ 2021, 16:39 IST
Last Updated 6 ಫೆಬ್ರುವರಿ 2021, 16:39 IST
ಹರ್ಷವರ್ಧನ್
ಹರ್ಷವರ್ಧನ್   

ನವದೆಹಲಿ: ದೇಶದಲ್ಲಿ ಇನ್ನೂ 7 ಕೋವಿಡ್ ಲಸಿಕೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಪ್ರತಿಯೊಬ್ಬ ನಾಗರಿಕನಿಗೂ ಲಸಿಕೆ ದೊರೆಯುವಂತೆ ಮಾಡಲು, ಇನ್ನಷ್ಟು ಲಸಿಕೆ ಅಭಿವೃದ್ಧಿ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ತಿಳಿಸಿದ್ದಾರೆ.

ಮುಕ್ತ ಮಾರುಕಟ್ಟೆಯಲ್ಲಿ ಲಸಿಕೆ ದೊರೆಯುವಂತೆ ಮಾಡುವುದಕ್ಕೆ ಕೇಂದ್ರ ಸರ್ಕಾರದ ಬಳಿ ತಕ್ಷಣದ ಯೋಜನೆ ಇಲ್ಲ. ಪರಿಸ್ಥಿತಿಗೆ ಅನುಗುಣವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

50 ವರ್ಷ ಮೇಲ್ಪಟ್ಟ ವಯಸ್ಸಿನವರಿಗೆ ಲಸಿಕೆ ನೀಡುವ ಕಾರ್ಯಕ್ರಮ ಮಾರ್ಚ್‌ನಲ್ಲಿ ಆರಂಭಗೊಳ್ಳಲಿದೆ ಎಂದೂ ಅವರು ತಿಳಿಸಿದ್ದಾರೆ.

‘ನಾವು ಕೇವಲ ಎರಡು ಲಸಿಕೆಗಳ ಮೇಲೆ ಅವಲಂಬಿತರಾಗಿರಲು ಸಾಧ್ಯವಿಲ್ಲ. ಇನ್ನೂ ಏಳು ದೇಶೀಯ ಲಸಿಕೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ.

ಮೂರು ಲಸಿಕೆಗಳು ಪ್ರಯೋಗ ಹಂತದಲ್ಲಿವೆ. ಎರಡು ಕ್ಲಿನಿಕಲ್ ಟ್ರಯಲ್‌ಗೂ ಮೊದಲಿನ ಹಂತದಲ್ಲಿವೆ. ಇನ್ನೊಂದು ಲಸಿಕೆಯ ಮೊದಲ ಹಂತದ ಪ್ರಯೋಗ ನಡೆಯುತ್ತಿದೆ. ಇನ್ನೊಂದು ಲಸಿಕೆಯ 2ನೇ ಹಂತದ ಪ್ರಯೋಗ ನಡೆಯುತ್ತಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.