ADVERTISEMENT

ಅಂತರರಾಷ್ಟ್ರೀಯ ವಿಮಾನಗಳ ಹಾರಾಟ ನಿರ್ಬಂಧ: ಮೇ 31ರ ವರೆಗೆ ವಿಸ್ತರಣೆ

ಏಜೆನ್ಸೀಸ್
Published 30 ಏಪ್ರಿಲ್ 2021, 8:23 IST
Last Updated 30 ಏಪ್ರಿಲ್ 2021, 8:23 IST
ಏರ್‌ ಇಂಡಿಯಾ ವಿಮಾನ–ಸಾಂದರ್ಭಿಕ ಚಿತ್ರ
ಏರ್‌ ಇಂಡಿಯಾ ವಿಮಾನ–ಸಾಂದರ್ಭಿಕ ಚಿತ್ರ   

ನವದೆಹಲಿ: ಕೊರೊನಾ ವೈರಸ್‌ ಸೋಂಕು ವ್ಯಾಪಿಸುವುದನ್ನು ನಿಯಂತ್ರಿಸಲು ಅಂತರರಾಷ್ಟ್ರೀಯ ವಿಮಾನಗಳ ಹಾರಾಟದ ಮೇಲೆ ವಿಧಿಸಿರುವ ನಿರ್ಬಂಧವನ್ನು ಮೇ 31ರ ವರೆಗೂ ವಿಸ್ತರಿಸಿ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಶುಕ್ರವಾರ ಸುತ್ತೋಲೆ ಪ್ರಕಟಿಸಿದೆ.

ಭಾರತದಲ್ಲಿ ಅಂತರರಾಷ್ಟ್ರೀಯ ವಿಮಾನಗಳ ಸಂಚಾರವನ್ನು 2021ರ ಮೇ 31ರ ವರೆಗೂ ನಿರ್ಬಂಧಿಸಲಾಗಿದೆ. ಈ ನಿರ್ಬಂಧವು ಅಂತರರಾಷ್ಟ್ರೀಯ ಕಾರ್ಗೊ ವಿಮಾನಗಳ ಕಾರ್ಯಾಚರಣೆಗಳ ಮೇಲೆ ಹಾಗೂ ನಿರ್ದಿಷ್ಟವಾಗಿ ಡಿಜಿಸಿಎ ಅನುಮತಿ ನೀಡಿರುವ ವಿಮಾನಗಳ ಹಾರಾಟಕ್ಕೆ ಅನ್ವಯವಾಗುವುದಿಲ್ಲ.

'ಈಗಾಗಲೇ ನಿಗದಿಯಾಗಿರುವ ಅಂತರರಾಷ್ಟ್ರೀಯ ವಿಮಾನಗಳನ್ನು ಆಯ್ದ ಮಾರ್ಗಗಳಲ್ಲಿ ಸಂಚರಿಸಲು ಅನುಮತಿ ನೀಡಬಹುದು' ಎಂದು ಡಿಜಿಸಿಎ ಪ್ರಕಟಣೆಯಲ್ಲಿ ತಿಳಿಸಿದೆ.

ADVERTISEMENT

ಭಾರತದಲ್ಲಿ ಕೋವಿಡ್‌ ಎರಡನೇ ಅಲೆ ತೀವ್ರವಾಗಿದ್ದು, ನಿತ್ಯ ಕೋವಿಡ್‌ ದೃಢಪಟ್ಟ 3.5 ಲಕ್ಷಕ್ಕೂ ಅಧಿಕ ಪ್ರಕರಣಗಳು ದಾಖಲಾಗುತ್ತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.