ನವದೆಹಲಿ: ಜಾಗತಿಕ ಆರ್ಥಿಕತೆ ಹಾಗೂ ಭೌಗೋಳಿಕ ರಾಜಕೀಯ ಸನ್ನಿವೇಶಗಳಲ್ಲಿನ ಅನಿರೀಕ್ಷಿತ ಬೆಳವಣಿಗೆಗಳು ಭಾರತ ಮತ್ತು ಜರ್ಮನಿಯು ತಮ್ಮ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸಿಕೊಂಡು ಕಾರ್ಯಪ್ರವೃತ್ತವಾಗಬೇಕಾದ ಅನಿವಾರ್ಯವನ್ನು ಸೃಷ್ಟಿಸಿವೆ ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್ ಹೇಳಿದ್ದಾರೆ.
ಜರ್ಮನಿ ವಿದೇಶಾಂಗ ಸಚಿವ ಜೋಹನ್ ವಡೆಫುಲ್ ಅವರೊಂದಿಗಿನ ಮಾತುಕತೆ ಬಳಿಕ ಜೈಶಂಕರ್ ಈ ಹೇಳಿಕೆ ನೀಡಿದ್ದಾರೆ.
‘ವ್ಯಾಪಾರ, ರಕ್ಷಣೆ, ಸೆಮಿಕಂಡಕ್ಟರ್ ಉತ್ಪಾದನೆ, ತಂತ್ರಜ್ಞಾನ ಹಾಗೂ ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉಭಯ ರಾಷ್ಟ್ರಗಳ ನಡುವಿನ ಸಹಕಾರ ವೃದ್ಧಿಗೆ ಸಂಬಂಧಿಸಿದ ವಿಚಾರಗಳ ಕುರಿತು ಚರ್ಚೆ ನಡೆಸಿದ್ದೇವೆ. ಶೀಘ್ರದಲ್ಲೇ ಈ ನಿಟ್ಟಿನಲ್ಲಿ ಮತ್ತೊಂದು ಸುತ್ತಿನ ಮಾತುಕತೆ ನಡೆದು ಅಂತಿಮ ನಿರ್ಣಯ ಕೈಗೊಳ್ಳಲಾಗುವುದು’ ಎಂದು ಜೈಶಂಕರ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.