ADVERTISEMENT

ವಿಶ್ವದಲ್ಲೇ ಅತಿಹೆಚ್ಚು ಲಸಿಕೆ ನೀಡಿರುವ ದೇಶ ಭಾರತ: ಕೇಂದ್ರ ಆರೋಗ್ಯ ಸಚಿವಾಲಯ

ಪಿಟಿಐ
Published 25 ಏಪ್ರಿಲ್ 2021, 10:20 IST
Last Updated 25 ಏಪ್ರಿಲ್ 2021, 10:20 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಜಾಗತಿಕವಾಗಿ ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಮತ್ತು ಗರಿಷ್ಠ ವೇಗದಲ್ಲಿ ಲಸಿಕೆ ನೀಡಿರುವ ದೇಶ ಭಾರತ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

ಈ ಬಗ್ಗೆ ಭಾನುವಾರ ಹೇಳಿಕೆ ಬಿಡುಗಡೆ ಮಾಡಿರುವ ಆರೋಗ್ಯ ಸಚಿವಾಲಯ, ‘ಕರ್ನಾಟಕವೂ ಸೇರಿದಂತೆ ಮಹಾರಾಷ್ಟ್ರ, ರಾಜಸ್ಥಾನ, ಉತ್ತರಪ್ರದೇಶ, ಗುಜರಾತ್, ಪಶ್ಚಿಮ ಬಂಗಾಳ, ಮಧ್ಯಪ್ರದೇಶ ಮತ್ತು ಕೇರಳದಲ್ಲಿ ಒಟ್ಟು ಶೇ 58.83ರಷ್ಟು ಲಸಿಕೆ ನೀಡಲಾಗಿದೆ’ ಎಂದಿದೆ.

ದೇಶದಲ್ಲಿ ಒಟ್ಟು 14,09,16,417 ಡೋಸ್ ಲಸಿಕೆಯನ್ನು ನೀಡಲಾಗಿದ್ದು, ಲಸಿಕೆ ಕಾರ್ಯಕ್ರಮ ಉತ್ತೇಜನಕ್ಕೆ ವಿವಿಧ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದೆ.

ADVERTISEMENT

ಈ ಪೈಕಿ, 92,90,528 ಆರೋಗ್ಯ ಕ್ಷೇತ್ರದ ಸಿಬ್ಬಂದಿ, ಅಧಿಕಾರಿಗಳು ಮತ್ತು 1,19,50,251 ಮುಂಚೂಣಿ ಕಾರ್ಯಕರ್ತರಿಗೆ ಆದ್ಯತೆಯಲ್ಲಿ ಲಸಿಕೆ ನೀಡಲಾಗಿದ್ದು, ಎರಡನೇ ಡೋಸ್ ಕೂಡ ಈಗಾಗಲೇ ಹೆಚ್ಚಿನ ಸಂಖ್ಯೆಯಲ್ಲಿ ಪಡೆದುಕೊಂಡಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.

ಅಲ್ಲದೆ, ಕಳೆದ 99 ದಿನಗಳಲ್ಲಿ, ಅತಿಹೆಚ್ಚಿನ ವೇಗದಲ್ಲಿ ಮತ್ತು ಗರಿಷ್ಠ ಸಂಖ್ಯೆಯಲ್ಲಿ, ಭಾರತ, 14 ಕೋಟಿ ಲಸಿಕೆ ವಿತರಿಸಿದೆ ಎಂದು ಸಚಿವಾಲಯ ಹೇಳಿದೆ.

ಆರೋಗ್ಯ ಕ್ಷೇತ್ರದವರಿಗೆ ಜನವರಿ 16ರಂದು, ಮುಂಚೂಣಿ ಕಾರ್ಯಕರ್ತರಿಗೆ ಫೆಬ್ರುವರಿ 2ರಂದು ಲಸಿಕೆ ಯೋಜನೆ ಆರಂಭಿಸಲಾಗಿತ್ತು. ಪ್ರಸ್ತುತ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದ್ದು, ಮೇ 1ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲು ಸರ್ಕಾರ ನಿರ್ಧರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.