ADVERTISEMENT

ಮೋದಿ ನೀತಿಯಿಂದಾಗಿ ದೇಶದಲ್ಲಿ ಆರ್ಥಿಕ ಹಿಂಜರಿತ : ರಾಹುಲ್‌ ಟೀಕೆ

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2020, 7:23 IST
Last Updated 12 ನವೆಂಬರ್ 2020, 7:23 IST
ರಾಹುಲ್‌
ರಾಹುಲ್‌   

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನೀತಿ ನಿಯಮಾವಳಿಯಿಂದಾಗಿ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ರಾಷ್ಟ್ರವು ಆರ್ಥಿಕ ಹಿಂಜರಿತವನ್ನು ಅನುಭವಿಸಬೇಕಾಗಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಗುರುವಾರ ಟೀಕಿಸಿದ್ದಾರೆ.

ಮೋದಿ ಅವರ ಕಾರ್ಯಕ್ರಮಗಳು ಭಾರತದ ಸದೃಢ ಆರ್ಥಿಕ ವ್ಯವಸ್ಥೆಯನ್ನು ದುರ್ಬಲಗೊಳಿಸಿವೆ ಎಂದು ಅವರು ಟ್ವಿಟರ್‌ನಲ್ಲಿ ಹೇಳಿದ್ದಾರೆ.

ಜುಲೈ– ಸೆಪ್ಟೆಂಬರ್‌ ತ್ರೈಮಾಸಿಕ ಅವಧಿಯಲ್ಲಿ ಜಿಡಿಪಿ 8.6ರಷ್ಟು ಕುಸಿಯುವ ಸಾಧ್ಯತೆಯಿದೆ ಎಂದಿರುವ ಆರ್‌ಬಿಐ ವರದಿಯನ್ನುಅವರು ಪ್ರಸ್ತಾಪಿಸಿದ್ದಾರೆ. ತಾಂತ್ರಿಕ ನೆಲೆಯಲ್ಲಿ ಭಾರತದ ಆರ್ಥಿಕತೆ ಹಿಂಜರಿತವನ್ನು ಪ್ರವೇಶಿಸುವ ಸಂಭವ ಇದೆ. ಆರ್ಥಿಕತೆ ಹಿಂದೆಂದೂ ಹೀಗೆ ಆಗಿರಲಿಲ್ಲ ಎಂದು ರಾಹುಲ್ ಅಭಿಪ್ರಾಯ ಪಟ್ಟಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.