ನವದೆಹಲಿ: ‘ಆಂತರಿಕ ವ್ಯವಹಾರಗಳಲ್ಲಿ ಅನಗತ್ಯವಾಗಿ ಹಸ್ತಕ್ಷೇಪ ಮಾಡುವುದನ್ನು ನಿಲ್ಲಿಸಿ’ ಎಂದು ಭಾರತವುಚೀನಾಕ್ಕೆ ಗುರುವಾರ ತಿರುಗೇಟು ನೀಡಿದೆ.
ಬುಧವಾರ ನಡೆದ ವಿಶ್ವಸಂಸ್ಥೆ ಭದ್ರತಾ ಮಂಡಳಿ (ಯುಎನ್‌ಎಸ್‌ಸಿ) ಸಭೆಯಲ್ಲಿಕಾಶ್ಮೀರದ ವಿಷಯವನ್ನು ಚರ್ಚಿಸುವಂತೆ ಪಾಕಿಸ್ತಾನ ಒತ್ತಾಯಿಸಿತ್ತು. ಇದಕ್ಕೆ ಚೀನಾ ಬೆಂಬಲ ಸೂಚಿಸಿತ್ತು. ಆದರೆ ಉಭಯ ರಾಷ್ಟ್ರಗಳ ಈ ಪ್ರಯತ್ನಕ್ಕೆ ಯಶಸ್ಸು ಸಿಕ್ಕಿರಲಿಲ್ಲ.
‘ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶಕ್ಕೆ ಸಂಬಂಧಿಸಿದಂತೆ ಚರ್ಚಿಸಬೇಕೆಂದು ಚೀನಾವು ವಿಶ್ವಸಂಸ್ಥೆ ಭದ್ರತಾ ಕೌನ್ಸಿಲ್‌ಗೆ ಮನವಿ ಮಾಡಿರುವುದು ನಮ್ಮ ಗಮನಕ್ಕೆ ಬಂದಿದೆ. ಚೀನಾ ಈಗಾಗಲೇ ಅನೇಕ ಬಾರಿ ಇಂತಹ ಪ್ರಯತ್ನಗಳನ್ನು ಮಾಡಿದೆ. ಆ ರಾಷ್ಟ್ರವು ನಮ್ಮ ಆಂತರಿಕ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡದಿರುವುದು ಒಳಿತು’ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.